ಚಿಂಚೋಳಿ: ‘ಭಾರತೀಯರಿಗೆ ಸಾಮಾಜಿಕ ನ್ಯಾಯ ನೀಡಿದ್ದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲಾ ವರ್ಗದವರ ಹಿತ ಕಾಪಾಡುವ ಕೆಲಸ ಮಾಡಿದ್ದಾರೆ. ಅವರು ದಲಿತ ನಾಯಕ ಎನ್ನುವುದು ಸರಿಯಲ್ಲ ಅವರೊಬ್ಬ ಮಹಾ ನಾಯಕ’ ಎಂದು ಶಿಕ್ಷಣ ಸಂಯೋಜಕ ಅಶೋಕ ಹೂವಿನಭಾವಿ ತಿಳಿಸಿದರು.

ಇಲ್ಲಿನ ಚಂದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಚಕೋರ ಸಾಹಿತ್ಯ ವೇದಿಕೆ, ಕಲಬುರಗಿ ಮತ್ತು ಕನ್ನಡ ವಿಭಾಗದ ಸಹಯೋಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನು ಹೇಳಿದ ಕೇಂದ್ರ ಸಾಹಿತ್ಯ ಸಲಹಾ ಸಮಿತಿ ಸದಸ್ಯೆ ಪ್ರೊ. ಜಯದೇವಿ ಗಾಯಕವಾಡ ಅಂಬೇಡ್ಕರ್ ಅವರ ಚಿಂತನೆಗಳು ಸಮಾಜದ ಸಮಾನತೆಗಾಗಿ ಬೆಳಗಿದ ದೀಪಗಳಾಗಿವೆ. ಅಂಬೇಡ್ಕರ್ ಎಂಬ ಸೂರ್ಯನಿಂದಲೇ ಶೋಷಣೆಯ ಕತ್ತಲಿನ ಕೂಪದಲ್ಲಿದ್ದ ಜನರ ಬದುಕಿಗೆ ಬೆಳಕಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಬಸವರಾಜ ಕೊನೇರಿ ಮಾತನಾಡಿ, ‘ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿನ ಯುವಜನತೆಗೆ ದಾರಿದೀಪವಾಗಬೇಕು’ ಎಂದರು.

ಪ್ರಾಸ್ತಾವಿಕವಾಗಿ ಪ್ರೊ. ಗವಿಸಿದ್ದಪ್ಪ ಎಚ್. ಪಾಟೀಲ ಮಾತನಾಡಿ ಸ್ವಾಗತಿಸಿದರು. ಪ್ರೊ. ಬಸವರಾಜೇಶ್ವರಿ ಹಾಲು ನಿರೂಪಿಸಿದರು. ಸಮರ್ಪಕವಾಗಿ ನಿರ್ವಹಿಸಿ, ಮಿರಾಜ್ ಪಾಶಾ ಅವರು ವಂದಿಸಿದರು.

ನಿವೃತ್ತ ಉಪನ್ಯಾಸಕ ರೇವಣಸಿದ್ದಪ್ಪ ದುಕಾನ, ಮಲ್ಲಿಕಾರ್ಜುನ ಪಾಲಾಮೂರ, ಬಸವರಾಜ ಐನ್ನೊಳ್ಳಿ, ಸತೀಶಕುಮಾರ, ಸಿದ್ದಪ್ಪ ಹೊಸಮನಿ ಮೊದಲಾದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-31-2044439717

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.