ಚಿಂಚೋಳಿ: ‘ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅಗತ್ಯತೆಯನ್ನು ಮನಗಂಡು, ಚಿಂಚೋಳಿಯಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಶಾಸಕ ಡಾ.ಅವಿನಾಶ ಜಾಧವ ಹೇಳಿದರು.

ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ 2025-26ನೇ ಶೈಕ್ಷಣಿಕ ವರ್ಷದ ಸಮಾರೋಪ ಸಮಾರಂಭ ಹಾಗೂ ಪದವಿ ವ್ಯಾಸಂಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರೊ.ಪ್ರಲ್ಹಾದ ಚೆಂಗಟೆ ಮಾತನಾಡಿ, ‘ವಿದ್ಯಾರ್ಥಿಗಳು ಮೊಬೈಲ್ ವ್ಯಸನದಿಂದ ದೂರವಿದ್ದು ಜ್ಞಾನ, ಕೌಶಲ ಮತ್ತು ವ್ಯಕ್ತಿತ್ವ ವಿಕಸನದತ್ತ ಗಮನ ಹರಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಕರೆ ನೀಡಿದರು.

ಸೈಯದ್ ಪಟೇಲ್ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಕನಸುಗಳನ್ನು ಕಾಣಬೇಕು ಹಾಗೂ ಆ ಕನಸುಗಳನ್ನು ನನಸಾಗಿಸಿಕೊಳ್ಳಲು ನಿರಂತರ ಪರಿಶ್ರಮ ಪಡಬೇಕು. ಗುರಿಯತ್ತ ದೃಢ ಸಂಕಲ್ಪದೊಂದಿಗೆ ಸಾಗಿದಾಗ ಯಶಸ್ಸು ಖಚಿತ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಬಸವರಾಜ ಕೋನೆರಿ ಮಾತನಾಡಿದರು. ಸಂತೋಷ ಕಟಕೆ ಸ್ವಾಗತಿಸಿದರು. ಬಸವರಾಜೇಶ್ವರಿ ಹಾಲು ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಿರಾಜ್ ಪಾಷಾ ಹಸನಲ್ ನಿರೂಪಿಸಿದರು. ಸತೀಶಕುಮಾರ ವಂದಿಸಿದರು. ಅನ್ನಪೂರ್ಣ ಸೇಡಂಕರ್ ಸೇರಿದಂತೆ ಚಿಂಚೋಳಿಯ ನಾಗರಿಕರು, ಶಿಕ್ಷಣ ಪ್ರೇಮಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-31-391207400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.