ಚಿಂತಾಮಣಿ: ದೇಶವು ಬ್ರಿಟಿಷರ ದಾಸ್ಯದಿಂದ ವಿಮೋಚನೆಗೊಂಡು 79 ವರ್ಷ ಕಳೆದ ಹೊರತಾಗಿಯೂ, ಗ್ರಾಮೀಣ ಪ್ರದೇಶದ ಜನರ ಬದುಕು ಅಸಹನೀಯ ಸ್ಥಿತಿಯಲ್ಲಿದೆ. ಅದರಲ್ಲೂ ದೀನ ದಲಿತರು, ಅಲ್ಪಸಂಖ್ಯಾತರ ಜೀವನ ಮತ್ತಷ್ಟು ನಿಕೃಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಬೇಸರ ವ್ಯಕ್ತಪಡಿಸಿದರು.

ವಿವಿಧ ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಗುರುವಾರ ನಗರದಲ್ಲಿ ಆಯೋಜಿಸಿದ್ದ ಭೀಮೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಂಬೇಡ್ಕರ್ ಸಂವಿಧಾನ ರಚಿಸಿ ಸುಮಾರು 70ಕ್ಕೂ ಹೆಚ್ಚು ವರ್ಷ ಕಳೆದರೂ, ಇತ್ತೀಚೆಗೆ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಹಾಕಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಅವರ ಭಾವಚಿತ್ರ ಹಾಕಲು ಇನ್ನೂ ಮೀನ-ಮೇಷ ಎಣಿಸಲಾಗುತ್ತಿದೆ. ಸಮಾಜದ ಬಗ್ಗೆ ಕಾಳಜಿ, ಬದ್ಧತೆ ಮತ್ತು ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಯ ಬಗ್ಗೆ ನೆನಪಿಸಿಕೊಳ್ಳದ ರಾಜಕೀಯ, ಇತ್ತೀಚಿನ ದಿನಗಳಲ್ಲಿ ಅವರನ್ನು ಆರಾಧಿಸುತ್ತಿವೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ಮುಖಂಡರು ತಮ್ಮ ಕಚೇರಿ ಮತ್ತು ಮನೆಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಅಳವಡಿಸಿಕೊಳ್ಳುತ್ತಿರುವುದು ಅವರ ಮೇಲಿನ ಪ್ರೀತಿ, ಕಾಳಜಿ ಅಥವಾ ಸ್ಮರಣೆಗಾಗಿ ಅಲ್ಲ. ಅಂಬೇಡ್ಕರ್ ಅವರನ್ನು ಆರಾಧಿಸುವ ದೀನ, ದಲಿತರು, ಅಲ್ಪಸಂಖ್ಯಾತ ಜನರು ತಮ್ಮನ್ನು ಬೆಂಬಲಿಸುತ್ತಾರೆ ಮತ್ತು ಅವರ ಮತಗಳನ್ನು ಸುಲಭವಾಗಿ ಸೆಳೆಯಬಹುದು ಎಂಬ ಕಾರಣಕ್ಕಾಗಿ ಎಂದು ರಾಜಕೀಯ ಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ದೇಶಕ್ಕೆ ಸಂವಿದಾನವನ್ನು ಕೊಡುಗೆಯಾಗಿ ನೀಡಿದ ಅಂಬೇಡ್ಕರ್ ವಿಶ್ವ ಖ್ಯಾತಿ ಹೊಂದಿದವರು. ಧೀಮಂತ ತತ್ವಜ್ಞಾನಿ, ಮಾನವತಾ, ವಿಜ್ಞಾನಿಯಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳು ಪ್ರತಿದಿನ, ಪ್ರತಿಕ್ಷಣ ಅಂಬೇಡ್ಕರ್ ಅವರನ್ನು ಜಪಿಸಬೇಕು ಎಂದು ಹೇಳಿದರು.

ದೇಶದಲ್ಲಿ ಈಗಲೂ ಸಹ ಅಸ್ಪೃಶ್ಯತೆ, ಅಸಮಾನತೆ, ಮೇಲು-ಕೀಳು ಎಂಬುದು ಸೇರಿದಂತೆ ಇನ್ನಿತರ ಸಾಮಾಜಿಕ ಸಮಸ್ಯೆಗಳು ತಾಂಡವವಾಡುತ್ತಿವೆ. ಇಂದಿಗೂ ಬೀದಿ ಗುಡಿಸುವವರು, ಕಸ ತೆಗೆಯುವವರು, ಒಳಚರಂಡಿ ಸ್ವಚ್ಛಗೊಳಿಸುವವರು, ನೇಗಿಲು ಉಳುವವರು ದಲಿತರೇ ಆಗಿದ್ದಾರೆ. ಅವರು ಜನರಲ್ಲವೇ? ಮನುಷ್ಯರಲ್ಲವೇ? ಅವರಿಗೂ ಹಕ್ಕುಗಳಿಲ್ಲವೇ ಎಂಬ ಚಿಂತನೆ ಮಾಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಯಾವುದೇ ಆಸೆ, ಅಮಿಷಗಳಿಗೆ ಮಾರು ಹೋಗಿ ಮತದಾನ ಮಾಡಬಾರದು ಎಂದು ಸಲಹೆ ನೀಡಿದರು.

ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ನಡೆದಿದೆಯೇ ಎಂಬ ಬಗ್ಗೆ ನಾವು ಚಿಂತಿಸಬೇಕಿದೆ. ಈವರೆಗೆ ಅಧಿಕಾರ ನಡೆಸಿರುವ ಎಲ್ಲ ಸರ್ಕಾರಗಳು ವಿಫಲವಾಗಿವೆ. ಅಂಬೇಡ್ಕರ್ ಆದರ್ಶ, ಸಿದ್ಧಾಂತಗಳು ಯಾವ ಪಕ್ಷಗಳಿಗೂ ಬೇಕಿಲ್ಲ. ಮತ ಗಳಿಕೆಗಾಗಿ ಅವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ ಎಂದು ಟೀಕಿಸಿದರು.

ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ತಬ್ಧಚಿತ್ರಗಳು ಮತ್ತು ಪಲ್ಲಕ್ಕಿಗಳ ಭವ್ಯ ಮೆರವಣಿಗೆ ನಡೆಯಿತು.

ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕವಾಲಿ ವೆಂಕಟರವಣಪ್ಪ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಪೊಲೀಸ್ ಅಪರಾಧಗಳ ಪ್ರಾಧಿಕಾರದ ಅಧ್ಯಕ್ಷ ಸುರೇಂದ್ರರಾವ್, ವಿಜಯನರಸಿಂಹ, ಎ.ಹರಿರಾಂ, ವೇಣುಗೋಪಾಲ್, ಎ.ಸಮದ್ ಖಾನ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-16-1086064177

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.