ಚಿಂತಾಮಣಿ: ತಾಲ್ಲೂಕಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಸೋಮವಾರ ಆರಂಭವಾಗಿವೆ. ಸುಮಾರು ಎರಡು ತಿಂಗಳ ನಂತರ ಶಾಲೆಗಳಲ್ಲಿ ಮಕ್ಕಳ ಕಲರವ ಕಂಡು ಬಂದಿದೆ. ಮೊದಲ ದಿನ ಶೇ 40ರಷ್ಟು ಮಕ್ಕಳು ಮಾತ್ರ ಹಾಜರಾಗಿದ್ದರು ಎಂದು ಅನೇಕ ಶಾಲೆಗಳ ಮುಖ್ಯ ಶಿಕ್ಷಕರು ತಿಳಿಸಿದರು.

1ರಿಂದ 10ನೇ ತರಗತಿವರೆಗೆ ವಿದ್ಯಾರ್ಥಿಗಳು ಗುಂಪು ಗುಂಪಾಗಿ ಶಾಲೆಗಳಿಗೆ ಆಗಮಿಸುತ್ತಿದ್ದ ದೃಶ್ಯಗಳು ನಗರದೆಲ್ಲೆಡೆ ಕಂಡುಬಂದಿತು. ಅನೇಕ ಶಾಲೆಗಳಲ್ಲಿ ಮಕ್ಕಳಿಗೆ ಹೂವು ನೀಡಿ ಸ್ವಾಗತಿಸಲಾಗಿದೆ. ಸಿಹಿ ಊಟ ಉಣಬಡಿಸಲಾಯಿತು. ಮೊದಲ ದಿನ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರಗಳನ್ನೂ ವಿತರಿಸಲಾಯಿತು.

ಪ್ರತಿವರ್ಷ ಶಾಲೆ ಆರಂಭವಾದ ತಿಂಗಳ ನಂತರ ಪುಸ್ತಕ, ಸಮವಸ್ತ್ರ ವಿತರಿಸಲಾಗುತ್ತಿತ್ತು. ಮಕ್ಕಳು ಖಷಿಯಿಂದ ಪರಸ್ಪರ ಶುಭಾಶಯ ಹಂಚಿಕೊಂಡರು.

ಮುಖ್ಯೋಪಾಧ್ಯಾಯರು, ಶಿಕ್ಷಕರು ಮೇ 29ರಂದೇ ಶಾಲೆಗಳಿಗೆ ಬಂದು ಶಾಲಾ ಸ್ವಚ್ಛತೆ ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-16-1754464314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.