ಚಿಂತಾಮಣಿ: ಕನ್ನಡ ಸಾಹಿತ್ಯ ಪರಿಷತ್ತು, ನಾಡಿನ ಸಾಹಿತ್ಯ ಚರಿತ್ರೆಯಲ್ಲಿ ಮಹತ್ವದ ಸಂಸ್ಥೆ. ಅನೇಕ ಸಾಹಿತಿಗಳನ್ನು, ಕನ್ನಡ ಭಾಷೆಯ ಕೀರ್ತಿಯನ್ನು ವಿಶ್ವ ಮಟ್ಟಕ್ಕೆ ಬೆಳೆಸಿರುವ ಪರಿಷತ್ತು ನೂರಾರು ವರ್ಷಗಳಿಂದ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದು ಹಿರಿಯ ಸಾಹಿತಿ ಕಾಗತಿ ವಿ.ವೆಂಕಟರತ್ನಂ ಹೇಳಿದರು.

ನಗರದ ಮಹಾತ್ಮ ಗಾಂಧಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಚೇರಿ ಉದ್ಘಾಟನೆ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡದ ಅಭಿವೃದ್ಧಿ, ಸಂರಕ್ಷಣೆ ಮತ್ತು ಪ್ರಸಾರದ ಧ್ಯೇಯವನ್ನು ಹೊತ್ತು ಸಾಗುತ್ತಿರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಚೇರಿಯನ್ನು ತೆರೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯ ಬೆಳವಣಿಗೆಗೆ ಇಂತಹ ಸ್ಥಳದ ಅಗತ್ಯವಿತ್ತು. ಹೊಸ ಕಚೇರಿ ಸಾಹಿತ್ಯ ಚಟುವಟಿಕೆಗಳಿಗೆ, ಸಭೆ ಮತ್ತು ಸಮಾರಂಭಗಳಿಗೆ ಸದುಪಯೋಗವಾಗಬೇಕು ಎಂದು ಅಭಿಪ್ರಾಯಪಟ್ಟರು.

ಶಿಕ್ಷಕ ಟಿ.ಎಂ ಈಶ್ವರ ಸಿಂಗ್ ಮಾತನಾಡಿ, ಅಂಬೇಡ್ಕರ್ ಭಾರತ ದೇಶದ ಸಂವಿಧಾನ ಶಿಲ್ಪಿಯಾಗಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮಹಾನ್ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಅವರ ಆದರ್ಶಗಳು ಇಂದಿನ ಯುವಜನತೆಗೆ ದಾರಿದೀಪವಾಗಿವೆ. ಚಿಂತನೆಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ನಿಜವಾದ ಸಮಾನತೆ ಸಾಧ್ಯ ಎಂಬುದು ಅಂಬೇಡ್ಕರ್ ಆಶಯವಾಗಿತ್ತು ಎಂದರು.

ಗಾಯಕ ಶಿವರಾಂ, ಶಿಕ್ಷಕ ನಾಗರಾಜು, ಶಿಕ್ಷಕ ಬಿ.ವಿಶ್ವನಾಥ ಅಂಬೇಡ್ಕರ್ ಕುರಿತ ಗೀತೆಗಳ ಗಾಯನ ಕಾರ್ಯಕ್ರಮಕ್ಕೆ ಮೆರುಗು ತಂದಿತು.

ತಾಲ್ಲೂಕು ಕಸಾಪ ಅಧ್ಯಕ್ಷ ಎನ್ ವಿ ಶ್ರೀನಿವಾಸನ್, ಸರ್ಕಾರಿ ನಿವೃತ್ತ ನೌಕರ ಸಂಘದ ಕಾರ್ಯದರ್ಶಿ ಆಂಜನಪ್ಪ, ವೈ.ಸರಸ್ವತಮ್ಮ, ಎಸ್.ಎನ್.ರಂಗನಾಥ, ಶಿ.ಮಾ.ಮಂಜುನಾಥ್, ಕೆ.ಎನ್. ರಮಣರೆಡ್ಡಿ, ಎಸ್.ಅಶ್ವಥ್, ಎಸ್.ಎಫ್.ಎಸ್. ಸುರೇಶ್, ವಿ.ರಮೇಶ್, ಕೆ.ಎಸ್ ನೂರುಲ್ಲಾ, ಕರವೇ ನಾಗರಾಜು, ಬಿ.ವಿಶ್ವನಾಥ್, ಪರಮೇಶ್ವರ ಗುಪ್ತ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-16-1612138991

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.