ಚಿಂತಾಮಣಿ: ತಾಲ್ಲೂಕಿನಲ್ಲಿ 2026–27ನೇ ಸಾಲಿನ ಶೈಕ್ಷಣಿಕ ವರ್ಷವು ಜೂನ್ 1ರಂದು ಆರಂಭವಾಗಲಿದೆ.

ಸುಮಾರು ಎರಡು ತಿಂಗಳ ಬಳಿಕ ಮಕ್ಕಳು ಶಾಲೆಗಳತ್ತ ಬರಲಿದ್ದು, ಸರ್ಕಾರಿ ಶಾಲಾ ಆವರಣಗಳಲ್ಲಿ ಮಕ್ಕಳ ಕಲರವ ಕಂಡುಬರಲಿದೆ. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಶುಕ್ರವಾರದಿಂದಲೇ ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳನ್ನು ಸ್ವಾಗತಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಶಾಲೆ ಆರಂಭವಾಗುವ ದಿನವೇ ಅಂದರೆ ನಾಳೆಯೇ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲು ತಯಾರಿ ನಡೆದಿದೆ. ಈಗಾಗಲೇ ಪಠ್ಯಪುಸ್ತಕಗಳು ಮತ್ತು ಸಮವಸ್ತ್ರಗಳು ಶಾಲೆಗಳಿಗೆ ತಲುಪಿವೆ. 1ರಿಂದ 10ನೇ ತರಗತಿಗೆ ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳಿಗೆ ಒಟ್ಟು 3.29 ಲಕ್ಷ ಪಠ್ಯಪುಸ್ತಕಗಳ ಬೇಡಿಕೆ ಇತ್ತು. ಈ ಪೈಕಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 1.76 ಲಕ್ಷ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಿಗೆ 1.43 ಲಕ್ಷ ಹಾಗೂ ಆರ್ಟಿಇ ಅಡಿ ಓದುವ ಮಕ್ಕಳಿಗೆ 9,045 ಪಠ್ಯ ಪುಸ್ತಕಗಳು ಬೇಕಿದೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಸರ್ಕಾರವೇ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಅನುದಾನರಹಿತ ಖಾಸಗಿ ಶಾಲೆಗಳಿಗೆ ಶುಲ್ಕ ಪಡೆದು ಶಿಕ್ಷಣ ಇಲಾಖೆಯು ಪಠ್ಯಪುಸ್ತಕಗಳನ್ನು ಪೂರೈಸುತ್ತದೆ. ಸರ್ಕಾರಿ ಮತ್ತು ಅನುದಾನಿತ ಹಾಗೂ ಆರ್ಟಿಇ ಬೇಡಿಕೆ ಪೈಕಿ 2,56,147 ಪುಸ್ತಕಗಳು ಪೂರೈಕೆಯಾಗಿವೆ. ಈ ಮೂಲಕ ಒಟ್ಟಾರೆ ಶೇ 77.8ರಷ್ಟು ಪಠ್ಯಪುಸ್ತಕಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತಲುಪಿದ್ದು, ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಬೇಡಿಕೆಯ 1.77 ಲಕ್ಷ ಪುಸ್ತಕಗಳ ಪೈಕಿ 1.35 ಲಕ್ಷ ಪುಸ್ತಕಗಳು ಪೂರೈಕೆಯಾಗಿವೆ. ಅನುದಾನರಹಿತ ಖಾಸಗಿ ಶಾಲೆಗಳ ಬೇಡಿಕೆಯ 1.49 ಲಕ್ಷ ಪುಸ್ತಕಗಳ ಪೈಕಿ 1.13 ಲಕ್ಷ ಪುಸ್ತಕಗಳು ಸರಬರಾಜಾಗಿವೆ. ಆರ್ಟಿಇ ಬೇಡಿಕೆಯ 9,045 ಪುಸ್ತಕಗಳ ಪೈಕಿ 8,050 ಪಠ್ಯಪುಸ್ತಕಗಳು ಪೂರೈಕೆಯಾಗಿವೆ. ಉಳಿದ ಪಠ್ಯಪುಸ್ತಕಗಳು ಶೀಘ್ರವೇ ಪೂರೈಕೆಯಾಗಲಿದ್ದು, ಶಾಲಾ ಆರಂಭದಲ್ಲೇ ಮಕ್ಕಳ ಕೈಗೆ ಪಠ್ಯಪುಸ್ತಕ ದೊರೆಯಲಿದೆ ಎನ್ನುತ್ತಾರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಉಳಿದ ಕೆಲವೇ ಕೆಲವು ಶೀರ್ಷಿಕೆಗಳು ಶೀಘ್ರವೇ ಪೂರೈಕೆಯಾಗಬೇಕಿದೆ.

ಶಾಲೆ ಆರಂಭದ ದಿನವೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಜೊತೆಗೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಬೇಕು. ಶಿಕ್ಷಕರು ಬದ್ಧತೆ, ಕರ್ತವ್ಯ ಪ್ರಜ್ಞೆ ತೋರಿದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ. ಶಿಕ್ಷಕರು, ಶಿಕ್ಷಕರ ಸಂಘಟನೆಗಳು ಗಮನಹರಿಸಬೇಕು ಎಂದು ಹಿರಿಯ ನಾಗರಿಕ ಶ್ಯಾಮರಾವ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-16-1850950097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.