ಚಿಂತಾಮಣಿ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ 2026–31ರ ಸಾಲಿನ ನಿರ್ದೇಶಕರ ಚುನಾವಣೆಯು ಶುಕ್ರವಾರ ಶಾಂತಿಯುತ ಮತ್ತು ಬಿರುಸಿನ ಶೇ 95.67ರಷ್ಟು ಮತದಾನವಾಯಿತು.

ಸಾಮಾನ್ಯ 9 ಹಾಗೂ ಮಹಿಳಾ ಮೀಸಲಾತಿಯಲ್ಲಿ 4 ಸೇರಿ ಒಟ್ಟು 13 ಸ್ಥಾನಗಳಿಗೆ 33 ಮಂದಿ ಸ್ಪರ್ಧಿಸಿದ್ದರು. ತಾಲ್ಲೂಕಿನಲ್ಲಿ ಒಟ್ಟು 671 ಮತದಾರರಿದ್ದು, 642 ಮಂದಿ ಹಕ್ಕು ಚಲಾಯಿಸಿದ್ದಾರೆ.

ನಗರದ ಮಹಾತ್ಮಗಾಂಧಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಚುನಾವಣೆ ನಡೆಯಿತು. ತಾಲ್ಲೂಕಿನಾದ್ಯಂತ ಆಗಮಿಸಿದ್ದ ನೂರಾರು ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಅಭ್ಯರ್ಥಿಗಳು ಅಂತಿಮ ಹಂತದವರೆಗೂ ಬಿರುಸಿನ ಪ್ರಚಾರ ನಡೆಸಿದರು. ಮತದಾನಕ್ಕೆ ಬಂದ ಮತದಾರರಿಗೆ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಕರಪತ್ರಗಳನ್ನು ನೀಡಿ ಮತ ಯಾಚಿಸುತ್ತಿದ್ದ ದೃಶ್ಯಗಳು ಕಂಡುಬಂದವು.

ಶಿಕ್ಷಕರು ಮೂರು ಸಿಂಡಿಕೇಟ್ ರಚಿಸಿಕೊಂಡು ಚುನಾವಣೆ ಪ್ರಚಾರ ನಡೆಸಿದ್ದರು. ಏ. 19ರಂದೇ ಚುನಾವಣೆ ನಡೆಯಬೇಕಿತ್ತು. ನ್ಯಾಯಾಲಯದ ತಡೆಯಾಜ್ಞೆಯಿಂದ ಚುನಾವಣೆ ಮುಂದೂಡಲಾಗಿತ್ತು. ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದ್ದರಿಂದ ಶುಕ್ರವಾರ ಚುನಾವಣೆ ನಡೆಯಿತು.

ಚುನಾವಣಾ ಕಣದಲ್ಲಿ ಪೈಪೋಟಿ ಇದ್ದರೂ, ಶಿಕ್ಷಕರು ತಮ್ಮಲ್ಲಿನ ಒಗ್ಗಟ್ಟು ಪ್ರದರ್ಶಿಸಿದರು.

ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ತನುಜ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಿಸಿ ಸುಸೂತ್ರವಾಗಿ ಚುನಾವಣೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-16-1709264230

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.