ಚಿಂತಾಮಣಿ: ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಕ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದಿಂದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.

ವಿಶ್ವ ಗ್ರಾಹಕರ ದಿನ ಮತ್ತು ವಿಶ್ವ ಜಲ ದಿನದ ಅಂಗವಾಗಿ ಹಮ್ಮಿಕೊಳ್ಳಲಾದ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶೆ ಆರ್. ಶಕುಂತಲ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ‘ದೇಶದ ಪ್ರಜೆಗಳು ಸಂವಿಧಾನಾತ್ಮಕ ಕಾನೂನುಗಳ ಅರಿವು ಪಡೆದುಕೊಂಡರೆ, ಬಹುತೇಕ ಸಮಸ್ಯೆಗಳು ನೀಗುತ್ತವೆ. ಈ ಮೂಲಕ ಸಮಾಜದಲ್ಲಿ ಶಾಂತಿ, ನೆಮ್ಮದಿ ಮನೆ ಮಾಡುತ್ತವೆ. ಸಾರ್ವಜನಿಕರು ದಿನನಿತ್ಯದ ಬದುಕಿನಲ್ಲಿ ಎದುರಾಗಬಹುದಾದ ಕಾನೂನುಗಳ ಅರಿವು ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಬಡವರು, ದುರ್ಬಲರು, ಅಸಹಾಯಕರು, ಶೋಷಿತರು, ಮಹಿಳೆಯರಿಗೆ ಉಚಿತ ಕಾನೂನು ನೆರವು ದೊರೆಯುತ್ತದೆ. ಅದಕ್ಕಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ ರಚಿಸಲಾಗಿದೆ. ಅಗತ್ಯವಿರುವವರು ಉಚಿತವಾಗಿ ಕಾನೂನು ನೆರವು ಪಡೆದುಕೊಳ್ಳಬಹುದು. ಕಾನೂನು ಅದಾಲತ್ಗಳನ್ನು ನಡೆಸಲಾಗುತ್ತಿದೆ. ನ್ಯಾಯಾಲಯದಲ್ಲಿರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.

ಗ್ರಾಹಕರ ಹಕ್ಕುಗಳ ಕುರಿತು ವಕೀಲ ವಿ. ರಮೇಶ್, ನೀರಿನ ಸಂರಕ್ಷಣೆ ಬಗ್ಗೆ ವಕೀಲೆ ಎನ್.ಶೋಭ ಉಪನ್ಯಾಸ ನೀಡಿದರು.

ಸಹಾಯಕ ಸರ್ಕಾರಿ ಅಭಿಯೋಜಕಿ ಎನ್.ಅನುರಾಧ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಕ ಕಾಲೇಜಿನ ಪ್ರಾಂಶುಪಾಲ ಬಸವರಾಜ, ವಕೀಲರ ಸಂಘದ ಅಧ್ಯಕ್ಷ ಬಿ.ಶ್ರೀನಿವಾಸ, ಉಪಾಧ್ಯಕ್ಷ ಶಿವಾನಂದ, ಕಾರ್ಯದರ್ಶಿ ಶ್ರೀನಾಥ, ಜಂಟಿ ಕಾರ್ಯದರ್ಶಿ ಕೆ.ಎನ್ ಮಂಜುನಾಥ, ಕೆ.ಪಿ. ಮುನಿರಾಜು, ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-16-642607113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.