ಚಿತ್ರದುರ್ಗ: ‘ಕೃತಕ ಬುದ್ಧಿಮತ್ತೆ (ಎಐ) ಜಗತ್ತಿನ ಮುಂದುವರಿದ ತಂತ್ರಜ್ಞಾನವಾಗಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಭವಿಷ್ಯ ಕಲ್ಪಿಸುವಲ್ಲಿ ದಾಪುಗಾಲು ಹಾಕುತ್ತಿದೆ’ ಎಂದು ಎಸ್ಜೆಎಂಐಟಿ ಪ್ರಾಂಶುಪಾಲ ಪಿ.ಬಿ.ಭರತ್ ತಿಳಿಸಿದರು.

ನಗರದ ಎಸ್ಜೆಎಂ ತಾಂತ್ರಿಕ ವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಎಐ ತಂತ್ರಜ್ಞಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ‘ವಿದ್ಯಾರ್ಥಿಗಳಿಗೆ ಎಐ ತಂತ್ರಜ್ಞಾನ ಹೆಚ್ಚು ಸಹಕಾರಿಯಾಗಲಿದೆ. ಯಾವುದೇ ಹೊಸ ಸಂಗತಿಯನ್ನು ನಿರ್ಲಕ್ಷ್ಯವಹಿಸದಂತೆ ಕಲಿಯಬೇಕು. ಆಗ ವೃತ್ತಿ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಸೂರ್ಯಪ್ರಕಾಶ್, ವಿನೋದ್, ಎಐ ಮತ್ತು ಎಂಎಲ್ ವಿಭಾಗದ ಮುಖ್ಯಸ್ಥ ಟಿ.ವಿ. ಅರವಿಂದ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಕೃಷ್ಣರೆಡ್ಡಿ, ಐಕ್ಯೂಎಸಿ ಮುಖ್ಯಸ್ಥ ಎ.ಎಂ.ರಾಜೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-1023541960

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.