ಚಿತ್ರದುರ್ಗ: ‘ಸ್ವಾತಂತ್ರ್ಯ ಹೋರಾಟ ಮತ್ತು ನಂತರದ ಸುಧಾರಣೆಗೆ ಅಂಬೇಡ್ಕರ್ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಡೆ, ನುಡಿ, ಚಿಂತನೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು’ ಎಂದು ಎಸ್ಜೆಎಂ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಎಲ್.ಈಶ್ವರಪ್ಪ ತಿಳಿಸಿದರು.

ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯಲ್ಲಿ ಆಯೋಜಿಸಿರುವ ಎನ್ಎಸ್ಎಸ್ ಶಿಬಿರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಕಲ್ಪನೆ ತೀರ ವಿಭಿನ್ನ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಗಳನ್ನು ಒಟ್ಟಿಗೆ ಸಾಧಿಸಬಲ್ಲ ಸಂವಿಧಾನವನ್ನು ನಮಗೆ ನೀಡಿದ್ದಾರೆ’ ಎಂದರು.

‘ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ, ಭೇದ– ಭಾವ ನಿರ್ವಹಣೆ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಿದ್ದಾರೆ. ಅವರ ತತ್ವಗಳನ್ನು, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಕೀಲೆ ದಿಲ್ಷದ್ ಉನ್ನೀಸಾ ತಿಳಿಸಿದರು.

ನಿವೃತ್ತ ಸೈನಿಕರಾದ ಜಯಣ್ಣ, ಎನ್.ಟಿ. ಗೋವಿಂದರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಗೀತಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-44-1011542612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.