ಚಿತ್ರದುರ್ಗ: ‘ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಏ.23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ನಗರದ 16 ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ಧತೆ ಕುರಿತು ಶನಿವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಒಟ್ಟು 6,640 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತ ಹಾಗೂ ಸುಗಮವಾಗಿ ನಡೆಸಬೇಕು’ ಎಂದರು.

‘ಕೆಇಎ ನಿಯಮದಂತೆ ಕೇಂದ್ರಗಳ ಮೇಲೆ ವೆಬ್ಕಾಸ್ಟಿಂಗ್ ಮೂಲಕ ನಿಗಾ ಇಡಲಾಗುತ್ತದೆ. ಪ್ರತಿ ಕಾಲೇಜಿಗೂ ಜಿಲ್ಲಾಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಣೆ ಹಾಗೂ ಸಂಗ್ರಹಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.

‘ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳು ಸಮರ್ಪಕವಾಗಿರಬೇಕು. ವಿಶೇಷವಾಗಿ ಅಂಗವಿಕಲ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನೆಲಮಹಡಿಯಲ್ಲೇ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಬಿಸಿಲಿನ ತಾಪ ಹೆಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೇಂದ್ರಗಳಲ್ಲಿ ನೆರಳಿನ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳು, ಉಪನ್ಯಾಸಕರು, ಕಚೇರಿ ಸಿಬ್ಬಂದಿ ಮೊಬೈಲ್ ಫೋನ್ ತರುವುದು ಹಾಗೂ ಕೈ ಗಡಿಯಾರ ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ, ಪರೀಕ್ಷಾ ಕಾರ್ಯವನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು’ ಎಂದು ತಾಕೀತು ಮಾಡಿದರು.

‘ನಗರದ ಎಸ್ಆರ್ಎಸ್ ಪಿಯು ಕಾಲೇಜು, ಕೆಎಂಎಸ್ ಪಿಯು ಕಾಲೇಜು, ಎಸ್ಜೆಎಂ ಪಿಯು ಕಾಲೇಜು, ನಮ್ಮ ಎಕ್ಸ್ಪರ್ಟ್ ಪಿಯು ಕಾಲೇಜು, ಚಿನ್ಮೂಲಾದ್ರಿ ಪಿಯು ಕಾಲೇಜು, ಚೈತನ್ಯ ಪಿಯು ಕಾಲೇಜು, ವಾಸವಿ ಪ್ರೌಢಶಾಲೆ, ವೆಸ್ಟರ್ನ್ ಹಿಲ್ಸ್ ಪಿಯು ಕಾಲೇಜು, ಕಂಪಳರಂಗ ಪಿಯು ಕಾಲೇಜು, ಸೇಂಟ್ ಜೋಸೆಫ್ ಪಿಯು ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು, ಬಾಲಕರ ಸರ್ಕಾರಿ ಪಿಯು ಕಾಲೇಜು, ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಎಸ್ಜೆಎಂಐಟಿ ಹಾಗೂ ಮಹಾರಾಣಿ ಪದವಿಪೂರ್ವ ಕಾಲೇಜು ಸೇರಿದಂತೆ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕೇಂದ್ರಗಳು ಇರುವುದಿಲ್ಲ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ತಿಮ್ಮಯ್ಯ ತಿಳಿಸಿದರು.

‘ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿ.ಸಿ.ಟಿ.ವಿ ಕಣ್ಗಾವಲು ಕಡ್ಡಾಯವಾಗಿರಬೇಕು. ಅಭ್ಯರ್ಥಿಗಳು ವಸ್ತ್ರಸಂಹಿತೆಯ ನಿಯಮಗಳನ್ನು ಪಾಲಿಸುವುದು ಕಡ್ಡಾಯ. ಸಮಸ್ಯೆ ಆಗದ ರೀತಿ ಗಮನಿಸಲು ಹಿರಿಯ ಉಪನ್ಯಾಸಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗುತ್ತದೆ’ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ರೇಖಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-44-352185266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.