ಚಿತ್ರದುರ್ಗ: ‘ನೂತನ ಗರ್ಭ ನಿರೋಧಕಗಳನ್ನು ಬಳಸುವ ಮೂಲಕ ಒಂದು ಮಗುವಿನಿಂದ ಮತ್ತೊಂದಕ್ಕೆ ಅಂತರ ಕಾಪಾಡಿ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ತಿಳಿಸಿದರು.

ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಈಚೆಗೆ ತಾಲ್ಲೂಕು ಆರೋಗ್ಯ ಶಿಕ್ಷಣ ಶಿಕ್ಷಣಾಧಿಕಾರಿ, ಶುಶ್ರೂಷಾಧಿಕಾರಿ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಿಗೆ ಆಯೋಜಿಸಿದ್ದ ನೂತನ ಗರ್ಭ ನಿರೋಧಕಗಳು ಮತ್ತು ಡಿಂಪಾ ಚುಚ್ಚುಮದ್ದು ತರಬೇತಿ ಉದ್ಘಾಟಿಸಿ ಮಾತನಾಡಿದರು.

‘ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಅಂತರ ಕಾಯ್ದುಕೊಳ್ಳುವುದು, ಜನಸಂಖ್ಯೆ ನಿಯಂತ್ರಣಕ್ಕೆ ಸಹಕಾರಿ ಆಗುತ್ತದೆ. ಜೊತೆಗೆ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಲು ನೆರವಾಗುತ್ತದೆ. ಸಮುದಾಯದಲ್ಲಿ ಜಾಗೃತಿ ಮೂಡಿಸುವ ಮೂಲಕ ಕಟ್ಟ ಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ತಲುಪಿಸಬೇಕು’ ಎಂದು ಹೇಳಿದರು.

ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ, ಸ್ತ್ರೀರೋಗ ತಜ್ಞ ಡಾ.ವಿನಯ್ ರಾಜ್, ಆಡಳಿತ ವೈದ್ಯಾಧಿಕಾರಿ ಶಶಿಕಿರಣ್, ಜಿಲ್ಲಾ ಗುಣಮಟ್ಟ ಸಲಹೆಗಾರರಾದ ಡಾ.ರೇಖಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-44-1437568419

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.