ಚಿತ್ರದುರ್ಗ: ‘ಪತ್ರಿಕೆ ಓದುವ ಅಭ್ಯಾಸ ವ್ಯಕ್ತಿಯ ಸಾಮಾನ್ಯ ಜ್ಞಾನ ವೃದ್ಧಿಸುವುದಲ್ಲದೆ, ಸಮಾಜದಲ್ಲಿ ನಡೆಯುವ ಒಳ್ಳೆಯ ಹಾಗೂ ಕೆಟ್ಟ ಘಟನೆಗಳ ಅರಿವು ಮೂಡಿಸುತ್ತದೆ. ಪತ್ರಿಕೆ ಕೇವಲ ಹಾಳೆಯಲ್ಲ, ಅದು ಜಗತ್ತನ್ನು ನೋಡುವ ಕಿಟಕಿ’ ಎಂದು ಹಿರಿಯ ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ತಿಳಿಸಿದರು.

ತಾಲ್ಲೂಕಿನ ದಾಮವ್ವನಹಳ್ಳಿಯಲ್ಲಿ ಡಾನ್ ಬೋಸ್ಕೋ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಿಂದ ಈಚೆಗೆ ಆಯೋಜಿಸಿದ್ದ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿ ಜೀವನದಲ್ಲಿ ದಿನ ಪತ್ರಿಕೆಯ ಮಹತ್ವದ ಕುರಿತು ಉಪನ್ಯಾಸ ನೀಡಿದ ಅವರು, ‘ಸಮಾಜದಲ್ಲಿನ ಅನಿಷ್ಟಗಳನ್ನು ಎತ್ತಿ ತೋರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಬದಲಾವಣೆಗೆ ದಾರಿಯಾಗುವ ಕಾರ್ಯವನ್ನು ಪತ್ರಿಕಾರಂಗ ಮಾಡುತ್ತಿದೆ’ ಎಂದು ಹೇಳಿದರು.

‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗು ತ್ತಿರುವ ವಿದ್ಯಾರ್ಥಿಗಳು ನಿತ್ಯ ಪತ್ರಿಕೆ ಓದುವ ಅಭ್ಯಾಸ ರೂಢಿಸಿಕೊಳ್ಳ ಬೇಕು. ಪತ್ರಿಕೆಗಳು ಕೇವಲ ಸುದ್ದಿಗಳಿಗೆ ಸೀಮಿತವಾಗಿಲ್ಲ. ಓದುಗರ ಬದುಕನ್ನು ಸಮೃದ್ಧಗೊಳಿಸುವ ಎಲ್ಲ ಅಂಶಗಳನ್ನೂ ಒಳಗೊಂಡಿರುತ್ತವೆ’ ಎಂದು ಹೇಳಿದರು.

ಮಾದಾರ ಚನ್ನಯ್ಯ ಗುರುಪೀಠದ ಸಿಇಒ ಎಚ್.ಎಸ್.ರಾಘವೇಂದ್ರ ಮಾತನಾಡಿದರು. ಪತ್ರಕರ್ತ ವೀರೇಂದ್ರ ಕೋಗುಂಡೆ ಮಠ, ಎನ್ಎಸ್ಎಸ್ ನೋಡಲ್ ಅಧಿಕಾರಿ ಎನ್.ಧನಕೋಟಿ, ಸಹ ಶಿಬಿರಾಧಿಕಾರಿಗಳಾದ ರಿಂಕಿ ಸುರೇಶ್, ಫೂಬಾಲನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-44-196984903

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.