ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಜೂನ್ ಎರಡನೇ ವಾರದಲ್ಲಿ ಸಮಾರಂಭ ನಡೆಯಲಿದೆ. ಎಸ್ಎಸ್ಎಲ್ಸಿಯಲ್ಲಿ ಶೇ 90 ಹಾಗೂ ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮೇ 30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9535384938, 9945187205 ಸಂಪರ್ಕಿಸುವಂತೆ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಟಿ. ಶ್ರೀನಿವಾಸನ್ ತಿಳಿಸಿದ್ದಾರೆ.

ಹೊಸದುರ್ಗ: ಸಿದ್ದರಾಮೇಶ್ವರ ವಿದ್ಯಾ ಸಂಸ್ಥೆ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕಗಳಿಸಿದ ಚಿತ್ರದುರ್ಗ ಜಿಲ್ಲೆಯ ನೊಳಂಬ ಲಿಂಗಾಯತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಎರಡು ಪಾಸ್ಪೋರ್ಟ್ ಸೈಜ್ ಭಾವಚಿತ್ರಗಳೊಂದಿಗೆ ಸಿದ್ದರಾಮನಗರದ ಸಿದ್ದರಾಮೇಶ್ವರ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕರಿಗೆ ಮೇ 30ರ ಒಳಗೆ ಅರ್ಜಿ ಸಲ್ಲಿಸಬಹುದು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂನ್ 13ರಂದು ಹೊಸದುರ್ಗದಲ್ಲಿ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆ. ಕರಿಬಸಪ್ಪ (7625025230), ವಿ.ಆರ್. ಪ್ರಕಾಶ್ (9731291964), ಕಿರಣ್ ಕುಮಾರ್ (9972977068) ಹಾಗೂ ರಾಜಕುಮಾರ್ (9986193920) ಅವರನ್ನು ಸಂಪರ್ಕಿಸಬಹುದು ಎಂದು ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷ ಮರಿದಿಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-44-852664862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.