ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ಈಚೆಗೆ ನಡೆದ ವಿಕಸಿತ ಭಾರತ ಯುವ ಸಂಸತ್ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಡಾನ್ ಬೋಸ್ಕೋ ಪದವಿ ಕಾಲೇಜಿನ ವಿದ್ಯಾರ್ಥಿನಿ ಆರ್.ವೈಷ್ಣವಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

‘ಕೇಂದ್ರ ಬಜೆಟ್ 2026; ವಿಕಸಿತ ಭಾರತ 2046ರ ಕಡೆ ಭಾರತೀಯ ಯುವಕರಿಗೆ ಬಲವಾದ ದಾರಿ’ ಕುರಿತು ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 155 ಸ್ಪರ್ಧಿಗಳು ಭಾಗವಹಿಸಿದ್ದರು. ಆರ್.ವೈಷ್ಣವಿ ಕನ್ನಡದಲ್ಲಿ ವಿಷಯ ಮಂಡಿಸುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ’ ಎಂದು ಉಪ ಪ್ರಾಂಶುಪಾಲ ಫಾ.ಕ್ರಿಸ್ಟಿ ಜೋಸೆಫ್ ತಿಳಿಸಿದ್ದಾರೆ.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಆರ್.ವೈಷ್ಣವಿ ಹಾಗೂ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎ.ನಿಧಿಶ್ರೀಯನ್ನು ಡಾನ್ ಬೋಸ್ಕೋ ಪದವಿ ಕಾಲೇಜು ಪ್ರಾಂಶುಪಾಲ ಫಾ.ಬೆನ್ನಿ ಕ್ರಿಸ್ತುದಾಸ್ ಅಭಿನಂದಿಸಿದರು. ಎನ್ಎಸ್ಎಸ್ ಜಿಲ್ಲಾ ನೋಡಲ್ ಅಧಿಕಾರಿ ಎನ್.ಧನಕೋಟಿ, ಸಹಾಯಕ ಪ್ರಾಧ್ಯಾಪಕರಾದ ಅಭಿಶಯ್, ಪೂಬಾಲನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-44-530607412

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.