ಚಿತ್ರದುರ್ಗ: ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಸ್ಥಳೀಯ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ. ಗ್ರಾಮಗಳಲ್ಲಿ ಹಿಂದಿನಿಂದಲೂ ಇರುವ ಶಾಲೆಗಳನ್ನು ಹಾಗೆಯೇ ಉಳಿಸಬೇಕು’ ಎಂದು ಒತ್ತಾಯಿಸಿ ಎಐಡಿಎಸ್ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಮುತ್ತಯ್ಯನಹಟ್ಟಿ ಗ್ರಾಮದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ನಮ್ಮೂರ ಶಾಲೆ ನಮ್ಮೂರಲ್ಲೇ ಉಳಿಸಿ’ ಹೋರಾಟದ ಅಂಗವಾಗಿ ಸಂಘಟನೆಗಳ ಸದಸ್ಯರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗ್ರಾಮೀಣ ಶಾಲೆ ಉಳಿಸಬೇಕು ಎಂದು ಒತ್ತಾಯಿಸಿದರು. ಗ್ರಾಮಸ್ಥರ ವಿರೋಧದ ನಡುವೆಯೂ ಸರ್ಕಾರ ಶಾಲೆಗಳನ್ನು ಮುಚ್ಚುವ, ಸ್ಥಳಾಂತರ ಮಾಡುವ ಕೆಲಸಕ್ಕೆ ಮುಂದಾಗಿದ್ದು, ಹಠಮಾರಿ ಧೋರಣೆ ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ನಮ್ಮ ಒಪ್ಪಿಗೆ ಇಲ್ಲ. ನಾವೆಲ್ಲರೂ ಕಲಿತ ಶಾಲೆಯಲ್ಲಿಯೇ ನಮ್ಮ ಮಕ್ಕಳೂ ಕಲಿಯಬೇಕು. ವಿದ್ಯಾರ್ಥಿಗಳ ಕೊರತೆ ಇದ್ದರೆ ಉತ್ತಮ ಶೈಕ್ಷಣಿಕ ವಾತಾವರಣ ರೂಪಿಸಿ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಾದ್ಯಂತ ಪೋಷಕರು, ವಿದ್ಯಾರ್ಥಿಗಳ ವಿರೋಧದ ನಡುವೆಯೂ ಸರ್ಕಾರ ಸ್ಥಳೀಯ ಶಾಲೆಗಳನ್ನು ಮುಚ್ಚಲು ಹೊರಟಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಎಂಬ ಹೋರಾಟಗಳು ವ್ಯಾಪಕವಾಗಿ ನಡೆಯುತ್ತಿವೆ. ತನ್ನ ಧೋರಣೆ ಬಿಡದ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಲು ಹೊರಟಿದೆ. ಅದರ ಸುತ್ತಮುತ್ತಲಿನ 5–6 ಕಿ.ಮೀ ಒಳಗೆ ಇರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಆದೇಶಗಳ ಮೇಲೆ ಆದೇಶ ಮಾಡುತ್ತಿದೆ’ ಎಂದರು.

‘ಗ್ರಾಮೀಣ ಭಾಗದಲ್ಲಿರುವ ಶಾಲೆಗಳ ಜೊತೆ ಸ್ಥಳೀಯರಿಗೆ ಭಾವನಾತ್ಮಕವಾದ ಸಂಬಂಧವಿದೆ. ರಾಜ್ಯ ಸರ್ಕಾರವು ಸರ್ವಾಧಿಕಾರಿ ಧೋರಣೆಯಿಂದ ಸರ್ಕಾರಿ ಶಾಲೆ ಮುಚ್ಚಿ ಹಳ್ಳಿ ಜನರನ್ನು ಅನಕ್ಷರಸ್ಥರನ್ನಾಗಿಸಲು ಹೊರಟಂತಿದೆ. ಬಹಳಷ್ಟು ಪೋಷಕರು ದೂರದ ಊರುಗಳಿಗೆ ತಮ್ಮ ಹೆಣ್ಣು ಮಕ್ಕಳನ್ನು ಕಳುಹಿಸಲು ಇಷ್ಟಪಡುವುದಿಲ್ಲ. ಬಾಲಕಿಯರನ್ನು ಶಿಕ್ಷಣದಿಂದ ವಂಚಿತಗೊಳಿಸುವ ಅಪಾಯ ಈ ಯೋಜನೆಯಿಂದ ಸೃಷ್ಟಿಯಾಗಲಿದೆ’ ಎಂದು ತಿಳಿಸಿದರು.

‘ರಾಜ್ಯದ ಎಲ್ಲಾ ಹಳ್ಳಿಯ ಜನ ಒಗ್ಗಟ್ಟಾಗಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಎಂಬ ಧ್ವನಿ ಕೇಳಿಬರುತ್ತಿದೆ. ರಾಜ್ಯ ಸರ್ಕಾರವು ಈ ಕೂಡಲೇ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಟ್ಟು, ಸರ್ಕಾರಿ ಶಾಲೆಗಳನ್ನು ಉಳಿಸಿ–ಬಲಪಡಿಸಬೇಕು’ ಎಂದು ಒತ್ತಾಯಿಸಿದರು.

‘ಮುತ್ತಯ್ಯನಹಟ್ಟಿಯಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಒಂದು ದಿನದ ಊಟಕ್ಕೆ ದಿನ ನಿತ್ಯ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. 400ಕ್ಕೂ ಹೆಚ್ಚು ಜನ ವಾಸವಿರುವ ಈ ಹಟ್ಟಿಯ ಸರ್ಕಾರಿ ಶಾಲೆಯಲ್ಲಿ 50ಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆ ಮುಚ್ಚಿದರೆ 5 ಕಿ.ಮೀ ದೂರದಲ್ಲಿರುವ ಪಿಳ್ಳೇಕೆರೆನಹಳ್ಳಿ ಕೆಪಿಎಸ್ ಶಾಲೆಗೆ ಹೋಗಬೇಕು. ಆದರೆ, ಸ್ಥಳೀಯರಿಂದ ಅದಕ್ಕೆ ಒಪ್ಪಿಗೆ ಇಲ್ಲ’ ಎಂದು ಹೇಳಿದರು.

‘ಈಚೆಗೆ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲ ಎಂಬ ಭಾವನೆ ಜನರಲ್ಲಿ ಇದೆ. ಬೇರೆ ಊರಿಗೆ ಹೋಗಿ ಶಿಕ್ಷಣ ಪಡೆಯಬೇಕೆಂದರೆ ಸಾಹಸ ಮಾಡಬೇಕಾಗುತ್ತದೆ. ನಮ್ಮ ಊರಿನ ಮಕ್ಕಳು ಮರಳಿ ಮನೆಗೆ ಬರುವತನಕ ಎದರು ನೊಡುತ್ತಾ ಇರಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಶಾಲೆಗನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್ಒ ರಾಜ್ಯ ಘಟಕದ ಕಾರ್ಯದರ್ಶಿ ಮಹಾಂತೇಶ್ ಬಿಳೂರು, ಜಿಲ್ಲಾ ಸಂಚಾಲಕ ಕೆ.ಈರಣ್ಣ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರಾದ ಬೋರಣ್ಣ, ಗೀತಮ್ಮ, ಲಲಿತಾ, ಸರೋಜಾ, ಲಕ್ಷ್ಮಿ, ಎಸ್ಡಿಎಂಸಿ ಅಧ್ಯಕ್ಷೆ ಪವಿತ್ರಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-44-1581977415

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.