ಚಿತ್ರದುರ್ಗ: ‘ಯುವಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜೀವನ ಶೈಲಿ ಬದಲಾಯಿಸಿ ಜೀವಿತ ಅವಧಿ ಹೆಚ್ಚಿಸಬೇಕು. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಆರೋಗ್ಯ ಶಿಕ್ಷಣ ಬಹುಮುಖ್ಯ’ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ತಿಳಿಸಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರೋಗ್ಯ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ದೀರ್ಘಕಾಲ ಆರೋಗ್ಯದಿಂದ ಇರಲು ಜನರು ಜೀವನ ಶೈಲಿ ಬದಲಾವಣೆ ಮಾಡಿಕೊಳ್ಳಬೇಕು. ಕುರುಕಲು ತಿಂಡಿಗಳಿಗೆ ಮಾರುಹೋಗದೆ ಜೀರ್ಣಕ್ರಿಯೆ ಸರಳಗೊಳಿಸುವ ಆಹಾರ ಪದಾರ್ಥಗಳ ಸೇವನೆ ಮಾಡಬೇಕು’ ಎಂದರು.

‘ಸಂಸ್ಕಾರದ ಜೊತೆಗೆ ಶುಚಿ ರುಚಿ ಆಹಾರ ಬಳಸಬೇಕು. ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಸರ್ಕಾರದಿಂದ ಉಚಿತವಾಗಿ ಲಭ್ಯ ಇರುವ ಲಸಿಕೆಗಳನ್ನು ಸಕಾಲಕ್ಕೆ ಪಡೆಯಬೇಕು’ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಗೌರಮ್ಮ ತಿಳಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ, ಪ್ರಾಂಶುಪಾಲ ಎಚ್.ಎಂ.ಜರೀಫ್ ಉಲ್ಲಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಶ್ರೀನಿವಾಸ್ ಮೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-44-849538634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.