ಶುಕ್ರವಾರ, ಡಿಸೆಂಬರ್ 3, 2021
26 °C

ಸಿಐಎಸ್‌ಸಿಇ: 10,12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸಿಐಎಸ್‌ಸಿಇ (ಕೌನ್ಸಿಲ್‌ ಫಾರ್‌ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್‌) 10 ಮತ್ತು 12ನೇ ತರಗತಿಯ ಮೊದಲ ಅವಧಿಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

‘ಅನಿವಾರ್ಯ ಕಾರಣಗಳಿಂದಾಗಿ ಸಿಐಎಸ್‌ಸಿಇ 10 ಹಾಗೂ 12ನೇ ತರಗತಿಯ 2021–2022ನೇ ಸಾಲಿನ ಮೊದಲ ಅವಧಿಯ ಸೆಮಿಸ್ಟರ್‌ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು’ ಎಂದು ಸಿಐಎಸ್‌ಸಿಇ ಮಂಡಳಿಯ ಕಾರ್ಯದರ್ಶಿ ಗೆರ‍್ರೆ ಅರ್ಥೂನ್‌ ಅವರು ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

10 ಹಾಗೂ 12ನೇ ತರಗತಿಯ ಮೊದಲ ಅವಧಿಯ ಪರೀಕ್ಷೆಯು ನವೆಂಬರ್ 15 ರಿಂದ ಆರಂಭವಾಗಬೇಕಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು