ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಐಎಸ್‌ಸಿಇ 10, 12ನೇ ತರಗತಿ ಫಲಿತಾಂಶ ಪ್ರಕಟ

Last Updated 24 ಜುಲೈ 2021, 11:23 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿ ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ.

12ನೇ ತರಗತಿಯಲ್ಲಿ ಶೇ 0.2ರಷ್ಟು ಅಂತರದಿಂದ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ವಿಶೇಷ ಸಂದರ್ಭದಲ್ಲಿ ಫಲಿತಾಂಶ ನಿರ್ಧರಿಸಿರುವುದರಿಂದ, ಕಳೆದ ವರ್ಷದಂತೆಯೇ ಈ ಬಾರಿಯೂ ಮೆರಿಟ್ ಲಿಸ್ಟ್ ಇಲ್ಲ ಎಂದು ಮಂಡಳಿ ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕದ ಕಾರಣ ಈ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯ ಆಧಾರದಲ್ಲಿ ಫಲಿತಾಂಶ ನಿರ್ಧರಿಸಲಾಗಿದೆ.

‘10ನೇ ತರಗತಿಯಲ್ಲಿ ಬಾಲಕಿಯರು ಮತ್ತು ಬಾಲಕರು ಸೇರಿ ತೇರ್ಗಡೆ ಪ್ರಮಾಣ ಶೇ 99.98 ಇದೆ. 12ನೇ ತರಗತಿಯಲ್ಲಿ ಬಾಲಕಿಯರ ತೇರ್ಗಡೆ ಪ್ರಮಾಣ ಶೇ 99.86 ಇದ್ದು, ಬಾಲಕರ ತೇರ್ಗಡೆ ಪ್ರಮಾಣ ಶೇ 99.66 ಇದೆ’ ಎಂದು ಸಿಐಎಸ್‌ಸಿಇ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿಗೆರ್ರಿ ಅರಾಥೂನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT