ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆ ರದ್ದು ಮಾಡಿ, ಇಲ್ಲವೇ ಆನ್‌ಲೈನ್‌ ಮೂಲಕ ನಡೆಸಿ: ಟ್ವಿಟರ್‌ನಲ್ಲಿ ಅಭಿಯಾನ

10,12ನೇ ತರಗತಿಯ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಮನವಿ
Last Updated 8 ಏಪ್ರಿಲ್ 2021, 8:04 IST
ಅಕ್ಷರ ಗಾತ್ರ

ನವದೆಹಲಿ: ‘ಮೇ ತಿಂಗಳಿನಲ್ಲಿ ನಡೆಯಲಿರುವ ಬೋರ್ಡ್‌ ಪರೀಕ್ಷೆಗಳನ್ನು ರದ್ದುಗೊಳಿಸಬೇಕು. ಇಲ್ಲವೇ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸಬೇಕು’ ಎಂದು ಕೋರಿ 10 ಹಾಗೂ 12ನೇ ತರಗತಿಯ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಸಂಬಂಧ ಸಿದ್ಧಪಡಿಸಿರುವ ಅರ್ಜಿಗೆ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ. ಅಲ್ಲದೇ, ಟ್ವಿಟರ್‌ನಲ್ಲಿ #cancelboardexams2021 ಜನಪ್ರಿಯವಾಗಿದೆ.

‘10 ಮತ್ತು 12 ನೇ ತರಗತಿಯ ಬೋರ್ಡ್‌ ಪರೀಕ್ಷೆಗಳ ವೇಳೆ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಬೇಕಾಗಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಮತ್ತು ಕೌನ್ಸಿಲ್‌ ಫಾರ್‌ ದಿ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೇಟ್‌ ಎಕ್ಸಾಮಿನೇಷನ್ಸ್‌ (ಸಿಐಎಸ್‌ಸಿಇ) ಹೇಳಿವೆ.

‘ಈ ಹಿಂದೆ ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಕಡಿಮೆಯಿದ್ದಾಗ ಸರ್ಕಾರವು ಬಾಕಿ ಉಳಿದಿದ್ದ ಕೆಲವು ಪರೀಕ್ಷೆಗಳನ್ನು ರದ್ದುಗೊಳಿಸಿತ್ತು. ಕೋವಿಡ್‌ ಏರುಗತಿಯಲ್ಲಿರುವ ಈ ಸಮಯದಲ್ಲಿ ಶಾಲೆಗಳನ್ನು ತೆರೆಯಲು ಯೋಜನೆ ರೂಪಿಸಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಸಚಿವರು ಚಿಂತನೆ ನಡೆಸಬೇಕು. ಈಗಾಗಲೇ ವಿದ್ಯಾರ್ಥಿಗಳು ತುಂಬಾ ಒತ್ತಡದಲ್ಲಿದ್ದಾರೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

‘ಪರೀಕ್ಷೆಗಳನ್ನು ಕನಿಷ್ಠ ಒಂದು ತಿಂಗಳಾದರೂ ಮುಂದೂಡಬೇಕು. ಬಳಿಕ ಸ್ಥಿತಿಗತಿಯನ್ನು ಪರಿಶೀಲಿಸಿ ನಿರ್ಧಾರವನ್ನು ಕೈಗೊಳ್ಳಬೇಕು’ ಎಂದು ದಿವ್ಯಾ ಗರ್ಗ್‌ ಎಂಬ10ನೇ ತರಗತಿ ವಿದ್ಯಾರ್ಥಿನಿ ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

ಸಾಮಾನ್ಯವಾಗಿ ಬೋರ್ಡ್‌ ಪರೀಕ್ಷೆಗಳನ್ನು ಫೆಬ್ರುವರಿಯಲ್ಲಿ ಆರಂಭಿಸಿ, ಮಾರ್ಚ್‌ನಲ್ಲಿ ಮುಕ್ತಾಯಗೊಳಿಸಲಾಗುತ್ತಿತ್ತು. ಆದರೆ ಕೋವಿಡ್‌ನಿಂದಾಗಿ ಈ ಪರೀಕ್ಷೆಗಳನ್ನು ಮೇ–ಜೂನ್‌ಗೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT