ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC, KPSC ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪ್ರಚಲಿತ ಮಾಹಿತಿ

Published 13 ಸೆಪ್ಟೆಂಬರ್ 2023, 23:30 IST
Last Updated 13 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ಯಪಿಎಸ್‌ಸಿ -ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆ- 2, ಕೆಪಿಎಸ್‌ಸಿ –ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆ-2 ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ರಾಷ್ಟ್ರೀಯ ಪ್ರಚಲಿತ ವಿದ್ಯಮಾನಗಳ ಕುರಿತ ನಾಲ್ಕು ಪ್ರಮುಖ ರಾಷ್ಟ್ರೀಯ ವಿದ್ಯಮಾನಗಳ ಮಾಹಿತಿಗಳು ಇಲ್ಲಿವೆ.

1. ಅಂತರರಾಷ್ಟ್ರೀಯ ಸೌರ ಒಕ್ಕೂಟ

ಇತ್ತೀಚೆಗೆ ಅಂತರರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷರು ಮತ್ತು ಭಾರತದ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್. ಕೆ. ಸಿಂಗ್ ಅವರು ಉಗಾಂಡ, ಕಮೋರೋಸ್ ಮತ್ತು ಮಾಲಿನಲ್ಲಿ ಒಂಬತ್ತು ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಉದ್ಘಾಟಿಸಿದರು.
ಇತ್ತೀಚೆಗೆ ರವಾಂಡಾದ , ಕಿಗಾಲಿನಲ್ಲಿ ಅಂತರರಾಷ್ಟ್ರೀಯ ಸೌರ ಒಕ್ಕೂಟದ ಐದನೇ ಪ್ರಾದೇಶಿಕ ಸಭೆ ಆಯೋಜಿಸಲಾಗಿತ್ತು ಮತ್ತು ಈ ಸಭೆಯಲ್ಲಿ 36 ರಾಷ್ಟ್ರಗಳು ಭಾಗವಹಿಸಿದ್ದವು.
ಒಟ್ಟು ಸೌರ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ 4 ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಉಗಂಡ, ಎರಡು ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಕಮೋರೋಸ್ ಮತ್ತು ಮೂರು ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಮಾಲಿಯಲ್ಲಿ ಉದ್ಘಾಟಿಸಲಾಯಿತು.
ಉದ್ಘಾಟನೆಯಾದ ಸೌರವಿದ್ಯುತ್ ಉತ್ಪಾದನಾ ಘಟಕಗಳು ಆ ಪ್ರದೇಶದ ಆರೋಗ್ಯ ಕೇಂದ್ರಗಳಿಗೆ ಮತ್ತು ಶಾಲೆಗಳಿಗೆ ವಿದ್ಯುತ್ ಪೂರೈಕೆಯನ್ನು ಮಾಡುತ್ತವೆ.

2. ರಾಷ್ಟ್ರೀಯ ಪೋಷಣ್ ಸಪ್ತಾಹ

ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್‌ ತಿಂಗಳ ಮೊದಲ ವಾರ ಭಾರತದಾದ್ಯಂತ ‘ರಾಷ್ಟ್ರೀಯ ಪೋಷಣ್ ಸಪ್ತಾಹ’ವನ್ನು ಆಚರಿಸಲಾಯಿತು.

ಭಾರತದಲ್ಲಿ ಸೆಪ್ಟೆಂಬರ್ 1 ರಿಂದ 7 ರವರೆಗೆ ರಾಷ್ಟ್ರೀಯ ಪೋಷಕಾಂಶ ಸಪ್ತಾಹ ಆಚರಿಸಲಾಗುತ್ತದೆ. ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯಕರ ಸದೃಢ ದೇಹ ಮತ್ತು ಮನಸ್ಸಿಗೆ ಪೌಷ್ಟಿಕಾಂಶಯುತ ಆಹಾರ ಅತ್ಯಗತ್ಯ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಆಚರಣೆ ಮಾಡಲಾಗುತ್ತದೆ.

 ‘ಪೌಷ್ಟಿಕ ಆಹಾರ ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ’ ಎಂಬ ಅರಿವನ್ನು ಸಾರ್ವಜನಿಕರಲ್ಲಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶಗಳಲ್ಲೊಂದು. ಈ ಬಾರಿಯದ್ದು ಆರನೇ ರಾಷ್ಟ್ರೀಯ ಪೋಷಣ್ ಸಪ್ತಾಹ. ಇದರ ಅಂಗವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಪೌಷ್ಟಿಕಾಂಶ ಆಹಾರದ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

3. ಎನ್‌.ಟಿ.ಆರ್. ಜನ್ಮಶತಮಾನೋತ್ಸವ, ನಾಣ್ಯ ಬಿಡುಗಡೆ

ಪ್ರಸಿದ್ಧ ನಟ, ತೆಲುಗು ದೇಶಂ ಪಕ್ಷದ ಸಂಸ್ಥಾಪಕ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಎನ್.ಟಿ. ರಾಮರಾವ್ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ ₹ 100 ಮುಖ ಬೆಲೆಯ ನಾಣ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಡುಗಡೆ ಮಾಡಿದರು.

ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ನಾಣ್ಯ ಬಿಡುಗಡೆ ಮಾಡಿದರು

ಎನ್. ಟಿ. ರಾಮರಾವ್ ಅವರು ತೆಲುಗು ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗ ಮತ್ತು ಸಂಸ್ಕೃತಿ ಯನ್ನು ಮತ್ತಷ್ಟು ಶ್ರೀಮಂತಗೊಳಿಸಿದರು. ತಮ್ಮ ವೃತ್ತಿ ಬದುಕಿನಲ್ಲಿ ರಾಮಾಯಣ, ಮಹಾಭಾರತದ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದರು. ವಿವಿಧ ಸಾಮಾಜಿಕ ಕಳಕಳಿ ಹೊಂದಿರುವ ಪಾತ್ರಗಳಲ್ಲಿ ಮನರಂಜನೆ ನೀಡುವುದರೊಂದಿಗೆ ಸಾಮಾಜಿಕ ಅರಿವನ್ನು ಹೆಚ್ಚಿಸಿದರು ಎಂದು ರಾಷ್ಟ್ರಪತಿಯವರು ಸ್ಮರಿಸಿದರು.

4. ಸಾಕ್ಷರತಾ ಸಪ್ತಾಹ

ಕೇಂದ್ರ ಶಿಕ್ಷಣ ಸಚಿವಾಲಯ, ನವಭಾರತ್ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ಸೆಪ್ಟೆಂಬರ್ 1 ರಿಂದ 8ರವೆಗೆ ರಾಷ್ಟ್ರೀಯ ಸಾಕ್ಷರತಾ ಸಪ್ತಾಹವನ್ನು ಆಯೋಜಿಸಿತ್ತು.

ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರ ಕೂಡ ಸೆಪ್ಟೆಂಬರ್ 1 ರಿಂದ ಒಂದು ವಾರದವರೆಗೆ ರಾಷ್ಟ್ರೀಯ ಸಾಕ್ಷರತಾ ಸಪ್ತಾಹವನ್ನು ಆಯೋಜಿಸಿತ್ತು. ನಾಗರಿಕರಲ್ಲಿ ಸಾಕ್ಷರತೆ ಬಗ್ಗೆ ಅರಿವನ್ನು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದು.

ಉಲ್ಲಾಸ್: ನವಭಾರತ ಸಾಕ್ಷರತಾ ಕಾರ್ಯಕ್ರಮ : idu ಕೇಂದ್ರ ಸರ್ಕಾರ 2022 ರಿಂದ 2027 ರ ಅವಧಿಗೆ ಅನುಷ್ಠಾನಕ್ಕೆ ತರುತ್ತಿರುವ ಸಾಕ್ಷರತಾ ಕಾರ್ಯಕ್ರಮ. ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಅನಕ್ಷರಸ್ಥ ವಯಸ್ಕರಿಗೆ ಶಿಕ್ಷಣ ನೀಡುವ ಕಾರ್ಯಕ್ರಮವಾಗಿದೆ. ಇದರ ಅಡಿಯಲ್ಲಿ ಐದು ಪ್ರಮುಖ ಉದ್ದೇಶಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಉದ್ದೇಶಗಳು: * ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ * ಮೂಲ ಶಿಕ್ಷಣ * ವೃತ್ತಿಪರ ಕೌಶಲ್ಯಗಳ ಅಭಿವೃದ್ಧಿ * ಜೀವನೋಪಾಯಕ್ಕೆ ಬೇಕಾದ ನಿರ್ಣಾಯಕ ಕೌಶಲ್ಯಗಳ ಅರಿವು * ಮೂಲ ಶಿಕ್ಷಣವನ್ನು ಪಡೆದ ನಂತರ ಮುಂದಿನ ಹಂತದ ಶಿಕ್ಷಣವನ್ನು ಪಡೆಯಲು ಅವಕಾಶವನ್ನು ಕಲ್ಪಿಸುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT