ಉಜಿರೆ: ಮಕ್ಕಳಲ್ಲಿ ಓದುವ ಸಂಸ್ಕೃತಿ ಬೆಳೆಸಬೇಕು. ಆಧುನಿಕ ಕಾಲದಲ್ಲಿ ಎಲ್ಲರೂ ಓದುವ, ಬರೆಯುವ ಹವ್ಯಾಸ ದಿಂದ ವಿಮುಖವಾಗುತ್ತಿರುವುದು ಖೇದಕರವಾಗಿದೆ. ಮಾತೃ ಸಂಸ್ಕೃತಿಯ ನೆಲೆಯಲ್ಲಿ ಕನ್ನಡ ಭಾಷೆಯನ್ನು ಬಳಸಿ, ಉಳಿಸಿ, ಬೆಳೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ನಿಕಟಪೂರ್ವ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ ಹೇಳಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಆಶ್ರಯದಲ್ಲಿ ಉಜಿರೆಯ ರೋಟರಿ ಸೇವಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯವು ಮನಸ್ಸನ್ನು ಕೆರಳಿಸಬಾರದು. ಮಾತೃಸಂಸ್ಕೃತಿಯ ನೆಲೆಯಲ್ಲಿ ನಮ್ಮ ನಡೆ-ನುಡಿ, ಆಚಾರ-ವಿಚಾರ, ಜೀವನಶೈಲಿ, ಸಂಸ್ಕಾರ ರೂಪುಗೊಳ್ಳಬೇಕು. ಮೊಬೈಲ್ಫೋನ್ ಬಳಕೆ ಕಡಿಮೆ ಮಾಡಿ ವಿದ್ಯಾರ್ಥಿಗಳು ಓದುವ ಮತ್ತು ಡೈರಿ ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ನಿವೃತ್ತ ಗಣಿತ ಪ್ರಾಧ್ಯಾಪಕ ಟಿ.ಪ್ರಕಾಶ ಪ್ರಭು ರಚಿಸಿದ ಕವನ ಸಂಕಲನ ಬಿಡುಗಡೆಗೊಳಿಸಿದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಎಂ.ಪಿ.ಶ್ರೀನಾಥ್ ಮಾತನಾಡಿ, ಬದುಕಿನ ಸೊಗಡನ್ನು ಆಸ್ವಾದಿಸಲು ಸಂಗೀತ ಮತ್ತು ಸಾಹಿತ್ಯ ಪ್ರೇರಕವಾಗಿವೆ. ಹೊಸ ಕವಿತೆ ರಚಿಸುವವರಿಗೆ ಇದು ಆಕರ ಕೃತಿಯಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಮಾತನಾಡಿ, ಸಾಹಿತ್ಯದ ಓದಿನಿಂದ ಜೀವನಾನುಭವ ಸಿಗುತ್ತದೆ. ಮನೆಯಲ್ಲಾದರೂ ಎಲ್ಲರೂ ಕನ್ನಡದಲ್ಲೇ ಮಾತನಾಡಬೇಕು ಎಂದರು.

ಬೆಳ್ತಂಗಡಿ ತಾಲ್ಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ಕುಮಾರ್ ಜೈನ್ ಮಾತನಾಡಿದರು.

ಸಮಾಜ ಸೇವೆಗಾಗಿ ಮಹಾತ್ಮ ಗಾಂಧಿ ಸದ್ಭಾವನಾ ಪ್ರಶಸ್ತಿ ಪುರಸ್ಕೃತರಾದ ಉಜಿರೆಯ ಉದ್ಯಮಿ ರಾಜೇಶ್ ಪೈ ಅವರನ್ನು ಅಭಿನಂದಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ನ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು.

‘ಹೊಸ ತಲೆಮಾರು ಮತ್ತು ಓದಿನ ಅಭಿರುಚಿ’ ಕುರಿತು ಹಳೆಮನೆ ರಾಜಶೇಖರ, ‘ಮನುಜ ಮತ, ವಿಶ್ವಪಥ’ ಕುರಿತು ದಿವಾ ಕೊಕ್ಕಡ ಹಾಗೂ ‘ತುಳುನಾಡಿನ ದೈವಾರಾಧನೆ’ ಕುರಿತು ರವೀಶ ಪಡುಮಲೆ ಉಪನ್ಯಾಸ ನೀಡಿದರು.

ಡಾ.ಪ್ರದೀಪ ನಾವೂರು ಸಾಹಿತ್ಯಾಸಕ್ತರೊಡನೆ ಸಂವಹನ ನಡೆಸಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ ಪ್ರಭು ಸ್ವಾಗತಿಸಿದರು. ಡಾ.ಎಂ.ಎಂ.ದಯಾಕರ ವಂದಿಸಿದರು. ನಿವೃತ್ತ ಮುಖ್ಯಶಿಕ್ಷಕ ಸೋಮಶೇಖರ ಶೆಟ್ಟಿ, ವಕೀಲೆ ಮನೋರಮಾ ಕಾರ್ಯಕ್ರಮ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-110091400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.