ಮಂಗಳೂರು: ಶೈಕ್ಷಣಿಕ ಗುಣಮಟ್ಟದಲ್ಲಿ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಫಲಿತಾಂಶ ದಾಖಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು 2026–27ನೇ ಶೈಕ್ಷಣಿಕ ಚಟುವಟಿಕೆಗೆ ಮತ್ತಷ್ಟು ಹುಮ್ಮಸ್ಸಿನಿಂದ ಸಜ್ಜಾಗಿವೆ. ರಾಜ್ಯದ ಇತರ ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ಮಾದರಿಯಾಗಿರುವ ಇಲ್ಲಿನ ಶಾಲೆಗಳು ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸವಾಲನ್ನೂ ಎದುರಿಸುತ್ತಿವೆ.

ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳುವುದು, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ ಚಟುವಟಿಕೆ ಹಮ್ಮಿಕೊಳ್ಳುವುದು, ಆಗಾಗ ಶಿಕ್ಷಕ– ಪೋಷಕರ ಸಭೆಗಳನ್ನು ಹಮ್ಮಿಕೊಳ್ಳುವುದು, ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು ಹಾಗೂ ಎಸ್ಎಸ್ಎಸ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಅಗ್ರಸ್ಥಾನ ಮುಂದುವರಿಸಿಕೊಂಡು ಹೋಗುವ ಯೋಜನೆಗಳೊಂದಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯ ಸರ್ಕಾರಿ ಶಾಲೆಗಳು ಅಣಿಯಾಗಿವೆ. ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಸೆಳೆಯಲು ವಿಶೇಷ ದಾಖಲಾತಿ ಆಂದೋಲನವನ್ನೂ ಜಿಲ್ಲೆಯಲ್ಲಿ ನಡೆಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1054 ಸರ್ಕಾರಿ ಹಾಗೂ 268 ಅನುದಾನಿತ ಶಾಲೆಗಳು ಇವೆ. 2025–26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶಗಳನ್ನು ಖಾಸಗಿ ಶಾಲೆಗಳ ಫಲಿತಾಂಶದ ಜೊತೆ ಹೋಲಿಸಿದರೆ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಸಾಧನೆ ಗಮನಾ ರ್ಹವೇ ಆಗಿತ್ತು. ಸರ್ಕಾರಿ ಪ್ರೌಢಶಾಲೆಗಳಲ್ಲಿ 110 ಶಾಲೆಗಳು ಶೇ 100 ಫಲಿತಾಂಶ, 68 ಶಾಲೆಗಳು ಶೇ 90ಕ್ಕೂ ಹೆಚ್ಚು ಫಲಿತಾಂಶ, 12 ಶಾಲೆಗಳು ಶೇ 80ಕ್ಕೂ ಹೆಚ್ಚು ಫಲಿತಾಂಶ, ಒಂದು ಶಾಲೆ ಶೇ 60ಕ್ಕಿಂತ ಹೆಚ್ಚು ಫಲಿತಾಂಶ ಪಡೆದಿವೆ. ಯಾವುದೇ ಪ್ರೌಢಶಾಲೆಯೂ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿಲ್ಲ. ಅನುದಾನಿತ ಪ್ರೌಢಶಾಲೆಗಳಲ್ಲಿ 50 ಶಾಲೆಗಳು ಶೇ 100 ಪಲಿತಾಂಶ, 52 ಶಾಲೆಗಳು ಶೇ 90ಕ್ಕೂ ಹೆಚ್ಚು ಫಲಿತಾಂಶ, ಒಂದು ಶಾಲೆ ಶೇ 80ಕ್ಕೂ ಹೆಚ್ಚು ಫಲಿತಾಂಶ ಪಡೆದಿವೆ. ಯಾವುದೇ ಅನುದಾನಿತ ಪ್ರೌಢಶಾಲೆಯೂ ಶೇ 80ಕ್ಕಿಂತ ಕಡಿಮೆ ಫಲಿತಾಂಶ ಪಡೆದಿಲ್ಲ. ಈ ಅಂಕಿ ಅಂಶಗಳೇ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟಕ್ಕೆ ಕನ್ನಡಿ ಹಿಡಿಯುತ್ತದೆ ಎನ್ನುತ್ತಾರೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಶಿಧರ ಜಿ.ಎಸ್.

‘ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವುದರ ಹಾಗೂ ಫಲಿತಾಂಶ ಸುಧಾರಣೆಯ ಹಿಂದೆ ಸಮರ್ಪಣಾ ಮನೋಭಾವದ ಶಿಕ್ಷಕರ ತ್ಯಾಗ ಹಾಗೂ ಪರಿಶ್ರಮವೂ ಇದೆ. ನಮ್ಮ ಜಿಲ್ಲೆಯ ಶಾಲೆಗಳಲ್ಲಿ ಪಠ್ಯ ಆಧರಿತ ಮೌಲ್ಯಮಾಪನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಅದರ ಜೊತೆಗೆ ಗೆಲುವಿನ ಹೆಜ್ಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಪ್ರಯತ್ನಗಳು ನಡೆದಿವೆ. ಕ್ರಮೇಣ ಎಲ್ಲ ಶಾಲೆಗಲೂ ಶೇ 100 ಫಲಿತಾಂಶ ದಾಖಲಿಸುವಂತೆ ಮಾಡಬೇಕೆಂಬ ಹೆಬ್ಬಯಕೆ ನಮ್ಮದು’ ಎಂದು ಅವರು ತಿಳಿಸಿದರು.

‘2025–26ನೇ ಸಾಲಿನಲ್ಲಿ ಜಿಲ್ಲೆಯ ಪ್ರೌಢಶಾಲೆಗಳ ಫಲಿತಾಂಶ 98.40. ಪರೀಕ್ಷೆ ಹಾಜರಾದ 27,207 ವಿದ್ಯಾರ್ಥಿಗಳಲ್ಲಿ ಕೇವಲ 435 ಮಂದಿ ಅನುತ್ತೀರ್ಣರಾಗಿದ್ದಾರೆ. 2024–27ನೇ ಸಾಲಿನಲ್ಲಿ 2,341 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ವಿದ್ಯಾರ್ಥಿಗಳು ಅನುತ್ತೀರ್ಣ ಆಗುವ ಪ್ರಮಾಣವನ್ನು ಎರಡಂಕಿಗೆ ಇಳಿಸುವ ಗುರಿಯೊಂದಿಗೆ ನಾವು ಪ್ರಸಕ್ತ ಶೈಕ್ಷಣಿಕ ವರ್ಷವನ್ನು ಆರಂಭಿಸುತ್ತಿದ್ದೇವೆ’ ಎಂದು ಉಪನಿರ್ದೇಶಕರು ತಿಳಿಸಿದರು.

ಪೀಠೋಪಕರಣ ಹಾಗೂ ಪಠ್ಯ ಸಾಮಗ್ರಿ ಕೊರತೆ ಇಲ್ಲಿನ ಶಾಲೆಗಳಲ್ಲಿ ಅಷ್ಟಾಗಿ ಇಲ್ಲ. ಸ್ಥಳೀಯರ, ಸಂಘ ಸಂಸ್ಥೆಗಳ ನೆರವು ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯ ಮೂಲಕ ಇಂತಹ ಕೊರತೆಗಳನ್ನು ನೀಗಿಸಲಾಗಿದೆ. ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತದೆ. ಪ್ರಕೃತಿ ವಿಕೋಪದಿಂದ ಕೆಲವು ಶಾಲಾ ಕಟ್ಟಡಗಳು ಹಾನಿಗೊಳಗಾಗಿದ್ದು, ಇದರ ದುರಸ್ತಿಗೂ ವಿಶೇಷ ಅನುದಾನ ಒದಗಿಸುವ ಮೂಲಕ ಜಿಲ್ಲಾಡಳಿತ ಕ್ರಮ ವಹಿಸಿದೆ ಎಂದರು.

‘ಜಿಲ್ಲೆಯಲ್ಲಿ ಮುಚ್ಚುವ ಹಂತದಲ್ಲಿರುವ ಯಾವುದೇ ಶಾಲೆಗಳಿಲ್ಲ. ಪಠ್ಯಪುಸ್ತಕ ಶೇ 75ರಷ್ಟು ಪೂರೈಕೆಯಾಗಿದೆ. ತರಗತಿಗಳು ಆರಂಭವಾಗುವಷ್ಟರಲ್ಲಿ ಎಲ್ಲ ಪಠ್ಯ ಪುಸ್ತಕಗಳು ಪೂರೈಕೆ ಆಗಲಿವೆ. ಈ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂನ್ 1ರಂದು ನಡೆಯಲಿದ್ದು, ಅಂದು ಶಿಕ್ಷಕ– ಪೋಷಕರ ಸಭೆಯೂ ನಡೆಯಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-29-1229749373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.