ದಾವಣಗೆರೆ: ಜಾಗತೀಕರಣ, ಉದಾರೀಕರಣದ ಪ್ರಭಾವದಿಂದ ಸಂಸ್ಕೃತಿ ನಾಶವಾಗುತ್ತಿದೆ. ಭಾರತದ ಶ್ರೇಷ್ಠ ಸಂಸ್ಕೃತಿಯನ್ನು ಉಳಿಸಿಕೊಳ್ಳುವತ್ತ ಗಮನ ಹರಿಸುವ ಅಗತ್ಯವಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಎಚ್. ವಿಶ್ವನಾಥ್ ಅಭಿಪ್ರಾಯಪಟ್ಟರು.

ಇಲ್ಲಿನ ಎಆರ್ಜಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಎಆರ್ಜಿ ವೈಭವ’ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣ ಯಾರ ಸ್ವತ್ತಲ್ಲ. ಅತ್ಯುತ್ತಮ ಸಾಧನೆ ಮಾಡಿದಾಗ ಶಿಕ್ಷಕರು ಸಂತೋಷ ಪಡುತ್ತಾರೆ. ಹಸಿವು, ಬಡತನ ನಿರ್ಮೂಲನೆಗೆ ಶಿಕ್ಷಣವೊಂದೇ ಅಸ್ತ್ರ. ಬದುಕಿನ ಸವಾಲುಗಳನ್ನು ಸ್ವೀಕರಿಸಿ ಉನ್ನತ ಬದುಕು ಕಟ್ಟಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ನಿವೃತ್ತ ಪ್ರಾಧ್ಯಾಪಕ ಜೆ.ಕೆ. ಮಲ್ಲಿಕಾರ್ಜುನಪ್ಪ, ‘ಭಾರತೀಯ ಪರಂಪರೆಯಲ್ಲಿ ವಸ್ತ್ರವಿನ್ಯಾಸಕ್ಕೆ ತುಂಬಾ ಮಹತ್ವವಿದೆ. ಪ್ರತಿ 60 ಕಿ.ಮೀ.ಗೆ ವಸ್ತ್ರದ ಶೈಲಿ ಬದಲಾಗುತ್ತದೆ. ದೇಶದಲ್ಲಿ ವೈವಿಧ್ಯತೆ ಇದ್ದರೂ ಏಕತೆ ಇದೆ’ ಎಂದು ನುಡಿದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬೊಮ್ಮಣ್ಣ, ‘ಭಾರತದ ವಸ್ತ್ರ ಪರಂಪರೆಗೆ ಜಗತ್ತಿನಲ್ಲಿ ಶ್ರೇಷ್ಠ ಸ್ಥಾನವಿದೆ. ಇಂದಿನ ಯುವಕರು ವಸ್ತ್ರವಿನ್ಯಾಸವನ್ನು ಉಳಿಸಿ ಬೆಳೆಸಬೇಕು’ ಎಂದು ಹೇಳಿದರು.

ಪ್ರಾಂಶುಪಾಲ ಜಿ.ಬಿ. ಬೋರಯ್ಯ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕಿ ಪ್ರೊ.ರಶ್ಮಿ, ಕನ್ನಡ ವಿಭಾಗದ ಮುಖ್ಯಸ್ಥ ಎಚ್.ಆರ್. ತಿಪ್ಪೇಸ್ವಾಮಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ರಮೇಶ ಪೂಜಾರ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಆನಂದ್, ಕಚೇರಿ ಅಧೀಕ್ಷಕ ಕರಿಬಸಪ್ಪ, ಉಪನ್ಯಾಸ ಕರಾದ ಕವಿತಾ ಪಾಟೀಲ್, ಮೌಸೀನಾ ಕೌಸರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-43-1585910425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.