ದಾವಣಗೆರೆ: ‘ವಿಕಸಿತ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡಲು ಶ್ರಮಿಸಬೇಕು’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ಬೆಳಗಾವಿ) ಕುಲಪತಿ ಎಸ್.ವಿದ್ಯಾಶಂಕರ ಹೇಳಿದರು.

ಇಲ್ಲಿನ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ‘ಚೈತ್ರ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಯುಬಿಡಿಟಿ ಕಾಲೇಜು ಯಾವುದೇ ಖಾಸಗಿ ಕಾಲೇಜಿಗಿಂತ ಹಿಂದೆ ಉಳಿದಿಲ್ಲ. ಮೇ 29, 30ರಂದು ಅಮೃತ ಮಹೋತ್ಸವ ಆಚರಿಸುತ್ತಿರುವ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಬಹಳ ಅದೃಷ್ಟವಂತರು’ ಎಂದರು.

‘ಕಾಲೇಜಿನಲ್ಲಿ 800 ಆಸನಗಳ ಸುಸಜ್ಜಿತ ಆಡಿಟೋರಿಯಂ ಸಿದ್ಧವಾಗುತ್ತಿದೆ. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಎಲ್ಲಾ ಬಗೆಯ ಲ್ಯಾಬ್ಗಳಿವೆ. ವಿಟಿಯುಗೆ ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳು ಬಂದಿವೆ’ ಎಂದು ತಿಳಿಸಿದರು.

‘ಕಲೆ, ಕ್ರೀಡೆಗೂ ಉತ್ತೇಜನ ನೀಡುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಾರಿಯ ಕಾರ್ಯಕ್ರಮ ವಿಶೇಷವಾಗಿರುವ ಕಾರಣ ಕಾಲೇಜು ಕೇಳಿದ್ದಕ್ಕಿಂತ ₹ 20 ಲಕ್ಷ ಹೆಚ್ಚು ಅನುದಾನವನ್ನು ವಿಶ್ವವಿದ್ಯಾಲಯದಿಂದ ನೀಡಲಾಗಿದೆ. ದೇಶದಲ್ಲೇ ಅಗ್ರಗಣ್ಯ ತಾಂತ್ರಿಕ ವಿಶ್ವವಿದ್ಯಾಲಯ ನಮ್ಮದಾಗಬೇಕು ಎಂಬ ಕನಸಿದೆ’ ಎಂದು ಹೇಳಿದರು.

‘ಈ ಹಿಂದೆ ₹ 90 ಸಾವಿರ ಅನುದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಿದ್ದೆವು. ಈ ಬಾರಿ ₹ 75 ಲಕ್ಷ ವೆಚ್ಚದಲ್ಲಿ ಚೈತ್ರ ಕಾರ್ಯಕ್ರಮ ನಡೆಸುತ್ತಿದ್ದೇವೆ. ಕುಲಪತಿ ಆದಿಯಾಗಿ ಎಲ್ಲರ ಸಹಕಾರದಿಂದ ಇದು ಸಾಧ್ಯವಾಗುತ್ತಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಡಿ.ಪಿ.ನಾಗರಾಜಪ್ಪ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ., ವಿವಿಧ ವಿಭಾಗಗಳ ಡೀನ್ಗಳಾದ ಮಂಜಾನಾಯ್ಕ ಎನ್., ಎಸ್.ಮಂಜಪ್ಪ, ಈರಪ್ಪ ಸೊಗಲದ, ಕೆ.ಮಂಜುನಾಥ್, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಹಾಗೂ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-43-1056853166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.