ದಾವಣಗೆರೆ: ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ಶನಿವಾರ ಡಿಆರ್ಎಂ ವಿಜ್ಞಾನ ಕಾಲೇಜಿನ ಸಾಂಸ್ಕೃತಿಕ ಸಂಘ, ಐಕ್ಯೂಎಸಿ ಅಡಿಯಲ್ಲಿ 2025- 26ನೇ ಸಾಲಿನ ಸಮಾರೋಪ ಸಮಾರಂಭ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ಶಿವಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಆದರ್ಶಮಯವಾದ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.

ರಂಗಕಲಾ ಶಿಕ್ಷಕ ವೆಂಕಟೇಶ್ವರ ಕೆ. ಅವರು ಡಿಆರ್ಎಂ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ರೋಹಿತ್ ಎಲ್.ಎಸ್. ಅವರ ಎರಡು ಇಂಗ್ಲಿಷ್ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ ಎಂ.ಪಿ. ಮಾತನಾಡಿದರು.

ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪ್ರಮುಖರಾದ ಡಾ.ಮಂಜುನಾಥ್ ಚೆನ್ನಿ, ಶಿವಪ್ಪ ಮಳ್ಳೂರ, ಡಾ.ಮಂಜುರಾಜ್ ಟಿ., ಡಾ.ವಸಂತ್ ನಾಯ್ಕ ಹಾಗೂ ಕಾಲೇಜಿನ ಎಲ್ಲ ಅಧ್ಯಾಪಕ ವೃಂದದವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-43-2024441168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.