ದಾವಣಗೆರೆ: ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಕಲಿಸುವ ಅಗತ್ಯವಿದೆ. ಇದಕ್ಕೆ ಮಕ್ಕಳು ಅಜ್ಜ–ಅಜ್ಜಿಯರ ಜೊತೆಗೆ ಹೆಚ್ಚು ಹೊತ್ತು ಕಾಲಕಳೆಯಲು ಪಾಲಕರು ಅವಕಾಶ ನೀಡಬೇಕು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಎಂ.ಎಸ್. ದಿವಾಕರ ಸಲಹೆ ನೀಡಿದರು.

ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘ ಹಾಗೂ ವೀರಶೈವ ಲಿಂಗಾಯತ ನೌಕರರ ಬಳಗದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು.

‘ಮಕ್ಕಳು ಚೆನ್ನಾಗಿ ಓದಿ ಕುಟುಂಬದ ಕೀರ್ತಿಯನ್ನು ಹೆಚ್ಚಿಸಲಿ ಎಂಬ ಪಾಲಕರ ಅತಿಯಾದ ಅಪೇಕ್ಷೆ ಸರಿಯಲ್ಲ. ಕೀರ್ತಿಯನ್ನು ಹೆಚ್ಚಿಸದಿದ್ದರೂ ಪರವಾಗಿಲ್ಲ, ಕಳಂಕ ತರದಿರುವಂತೆ ನೋಡಿಕೊಳ್ಳಬೇಕಿದೆ. ಆರ್ಥಿಕ ಸಂಕಷ್ಟವನ್ನು ತಂದುಕೊಂಡು ಶಿಕ್ಷಣ ಕೊಡಿಸುವುದು ಬೇಡ. ಕೈಲಾದಷ್ಟು ಶ್ರಮಪಟ್ಟು ಶಿಕ್ಷಣ ಕೊಡಿಸಿ. ಉನ್ನತ ಶಿಕ್ಷಣಕ್ಕೆ ಒತ್ತು ನೀಡಿ’ ಎಂದು ಕಿವಿಮಾತು ಹೇಳಿದರು.

‘ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸಾಧನೆ ಮಾಡಿರುವುದಾಗಿ ಕೆಲವರು ಹೇಳಿಕೊಳ್ಳುತ್ತಾರೆ. ಇದು ಅರ್ಧ ಸತ್ಯ ಮಾತ್ರ. ಇಂತಹ ಮಾತುಗಳನ್ನು ವಿದ್ಯಾರ್ಥಿಗಳು ಸಂಪೂರ್ಣ ನಂಬಬಾರದು. ಶಿಕ್ಷಣ, ಜ್ಞಾನಾರ್ಜನೆಗೆ ಎಂದಿಗೂ ಬೆಲೆ ಇದೆ. ವಿದ್ಯಭ್ಯಾಸದ ಕಡೆಗೆ ಒಲವು ಬೆಳೆಸಿಕೊಳ್ಳಬೇಕು’ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಎಸ್.ಒಡೇನಪುರ, ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲೋಕಣ್ಣ ಮಾಗೋಡ್ರ, ಉಪಾಧ್ಯಕ್ಷ ರೇವಣ ಸಿದ್ದಪ್ಪ ಅಂಗಡಿ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಎನ್. ಆನಂದಗೌಡ, ಕೃಷಿ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ ಆರ್. ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-43-690306213

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.