ದಾವಣಗೆರೆ: ಪ್ರಾಚೀನ ಜ್ಞಾನದ ಸಂಪತ್ತನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಉದ್ದೇಶದಿಂದ ಕೈಗೆತ್ತಿಕೊಂಡಿರುವ ಅಪರೂಪದ ಶಿಲಾಶಾಸನ, ಹಸ್ತಪ್ರತಿ ಸಂರಕ್ಷಣೆ ಹಾಗೂ ಐತಿಹಾಸಿಕ ಸ್ಮಾರಕಗಳನ್ನು ಗುರುತಿಸುವ ಸಮೀಕ್ಷೆ ಕಾರ್ಯವನ್ನು ಮೇ 15 ರೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸನ ಮತ್ತು ಸ್ಮಾರಕಗಳ ಸಂರಕ್ಷಣೆ ಕುರಿತು ಬುಧವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜ್ಞಾನ ಭಾರತಂ ಮಿಷನ್’ ಯೋಜನೆಯಡಿ ಅಮೂಲ್ಯ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ ಮತ್ತು ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗಿದೆ. ಶತಮಾನಗಳ ಇತಿಹಾಸವಿರುವ ಹಸ್ತಪ್ರತಿಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಸಂರಕ್ಷಿಸಬೇಕಿದೆ’ ಎಂದರು.

‘ದೇಶದ ಎಲ್ಲೆಡೆ ಇರುವ ಹಸ್ತಪ್ರತಿಗಳ ಮಾಹಿತಿಯನ್ನು ಸಂಗ್ರಹಿಸಿ ‘ರಾಷ್ಟ್ರೀಯ ಭಂಡಾರ’ ನಿರ್ಮಿಸಲಾಗುವುದು. ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಮಿತಿ ಹಾಗೂ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದೆ’ ಎಂದು ವಿವರಿಸಿದರು.

‘ಗ್ರಂಥಾಲಯ, ದೇವಾಲಯ, ಮಠ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿರುವ ಖಾಸಗಿ ಸಂಗ್ರಹದ ಹಸ್ತಪ್ರತಿಗಳನ್ನು ಗುರುತಿಸಿ ದಾಖಲಿಸಬೇಕಿದೆ. ಸಮೀಕ್ಷಾ ತಂಡಗಳಿಗೆ ಅಗತ್ಯ ಸಹಕಾರ ನೀಡುವುದು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು ಸಮಿತಿಗಳ ಕರ್ತವ್ಯ. ರಾಜ್ಯದ 17 ಜಿಲ್ಲೆಗಳಲ್ಲಿ ಈಗಾಗಲೇ ಸಮೀಕ್ಷೆ ಆರಂಭವಾಗಿದೆ. ಏ.27ರ ಹೊತ್ತಿಗೆ 2,13,255 ಹಸ್ತಪ್ರತಿಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ಸಹ ಹಸ್ತಪ್ರತಿಗಳ ಮಾಹಿತಿ ಹಂಚಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಹೇಳಿದರು.

‘ಈ ಮೂಲಕ ರಾಜ್ಯವಾರು ಸಮಗ್ರ ದತ್ತಾಂಶ ಭಂಡಾರ ನಿರ್ಮಾಣವಾಗಲಿದೆ. ರಾಷ್ಟ್ರೀಯ ಹಸ್ತಪ್ರತಿ ಸಂಗ್ರಹ ನಕ್ಷೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಅಪರೂಪದ ಮತ್ತು ನಾಶವಾಗುವ ಭೀತಿಯಲ್ಲಿರುವ ಹಸ್ತಪ್ರತಿಗಳನ್ನು ಗುರುತಿಸಿ ಸಂರಕ್ಷಿಸಲು ಸಾಧ್ಯವಾಗುತ್ತದೆ. ಸಾರ್ವಜನಿಕರು ಮತ್ತು ಸಂಸ್ಥೆಗಳು ತಮ್ಮಲ್ಲಿರುವ ಹಸ್ತಪ್ರತಿಗಳ ಮಾಹಿತಿಯನ್ನು ನೀಡಿ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಜಿಲ್ಲೆಯ ಹರಿಹರೇಶ್ವರ ದೇವಸ್ಥಾನ, ತಾವರೆಕೆರೆಯ ಶಿಲಾಮಠ, ಚನ್ನಗಿರಿಯ ಎರಡು ಶಿಲಾಮಠ, ಜಗಳೂರಿನ ಪುರಾತನ ಮಠಗಳು, ಹದಡಿ ಮತ್ತು ಅಣಬೇರು ಹಳೆಯ ಕೋಟೆಗಳು, ಹೊನ್ನಾಳಿಯ ಹಿರೇಕಲ್ಲು ಮಠ ಹಾಗೂ ಕಲ್ಲೇಶ್ವರ ಮತ್ತು ಭೀಮೇಶ್ವರ ದೇವಸ್ಥಾನಗಳಲ್ಲಿರುವ ಐತಿಹಾಸಿಕ ದಾಖಲೆಗಳನ್ನು ಪರಿಶೀಲಿಸಬೇಕು’ ಎಂದು ಸೂಚನೆ ನೀಡಿದರು.

‘ದೇಶದ ಸಾಂಸ್ಕೃತಿಕ ಪರಂಪರೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಐತಿಹಾಸಿಕ ಸ್ಮಾರಕಗಳ ಚಿತ್ರಗಳನ್ನು ಅಸಭ್ಯವಾಗಿ, ವಿಕೃತವಾಗಿ ಅಥವಾ ದುರುದ್ದೇಶಪೂರಿತವಾಗಿ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಚಟುವಟಿಕೆಗಳು ರಾಷ್ಟ್ರದ ಘನತೆಗೆ ಕುಂದು ತರುತ್ತವೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಸ್ಮಾರಕಗಳ ಚಿತ್ರಗಳನ್ನು ವಿರೂಪಗೊಳಿಸುವುದು, ಅವುಗಳನ್ನು ಬಳಸಿಕೊಂಡು ಸಮಾಜದಲ್ಲಿ ತಪ್ಪು ಸಂದೇಶ ರವಾನಿಸುವವರ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಲಾಗಿದೆ. ರಾಷ್ಟ್ರೀಯ ಪರಂಪರೆಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗುವುದು. ಪ್ರವಾಸಿಗರು ಸ್ಮಾರಕಗಳ ಬಳಿ ಚಿತ್ರ ತೆಗೆಯುವಾಗ ಆ ಸ್ಥಳದ ಪಾವಿತ್ರ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು’ ಎಂದರು.

ಶಾಸನ ಸಂರಕ್ಷಕ ಹಿ.ಗು. ದುಂಡೆಪ್ಪ ಸಂರಕ್ಷಿಸಿರುವ ತಾಳೆಗರಿಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿದರು. ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಭಿತ್ತಿಚಿತ್ರವನ್ನು ಬಿಡುಗಡೆ ಮಾಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ಎಎಸ್ಪಿ ಪರಮೇಶ್ವರ ಹೆಗಡೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಗೌಡರ್, ಮುಖ್ಯ ಯೋಜನಾಧಿಕಾರಿ ಮಲ್ಲಾ ನಾಯ್ಕ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಕಾವ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-43-688506232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.