ನ್ಯಾಮತಿ: ‘ಕನ್ನಡ ಭಾಷೆ ಉಳಿವಿಗೆ ಮತ್ತು ಬೆಳವಣಿಗೆಗೆ ಕವಿಗಳು, ಸಾಹಿತಿಗಳು ಕನ್ನಡದ ಕಣ್ತೆರೆಸುವ ಕೆಲಸ ಮಾಡಬೇಕಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತು ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ.ಮಂಜುನಾಥಯ್ಯ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ ಮತ್ತು ಚುಟುಕು ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ತಾಲ್ಲೂಕಿನ 16 ಕವಿಗಳು ಹೊರತಂದಿರುವ ‘ಬೆಳುವಲ ಮಡಿಲ ಕಾವ್ಯಾಂಜಲಿ’ ಕವನ ಪುಸ್ತಕಗಳನ್ನು ಕವಿಗಳಿಗೆ ವಿತರಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಉಳಿವಿನ ಬಗ್ಗೆ ಮಾತನಾಡುವವರು ವೇದಿಕೆಗೆ ಸೀಮಿತವಾಗಬಾರದು. ಹೊರಗಡೆಯೂ ಇವರ ಹೋರಾಟ ನಡೆಯಬೇಕಿದೆ ಎಂದರು.

‘ಯಾವುದೇ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸಮುದಾಯದ ಸಹಕಾರ ಮುಖ್ಯ. ಕನ್ನಡದ ಮನಸ್ಸುಗಳು ಕೈಜೋಡಿಸಿದರೆ ಮಾತ್ರ ಇದು ಸಾಧ್ಯ. ಈ ನಿಟ್ಟಿನಲ್ಲಿ ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾದರಿ ಚಟುವಟಿಕೆಗಳನ್ನು ಮಾಡುತ್ತಿರುವುದು ಶ್ಲಾಘನೀಯ’ ಎಂದು ಕನ್ನಡ ಸಾಹಿತ್ಯ ಪರಿಷತ್ತು ಚನ್ನಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಜಿ.ಮಧುಕುಮಾರ ಹೇಳಿದರು.

ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಮತ್ತು ಪ್ರಕಾಶಕ ತೆಲಗಿ ವೀರಭದ್ರಪ್ಪ ಮಾತನಾಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಕವಿರಾಜ, ಕವಿ ಜಿ.ನಿಜಲಿಂಗಪ್ಪ, ಕಸಾಪ ಆಜೀವ ಸದಸ್ಯ ಕೆ.ಬಸವರಾಜಪ್ಪ, ನಿವೃತ್ತ ಪ್ರಾಂಶುಪಾಲ ಕಂಠಪ್ಪ, ವೀಣಾ ಸಾಗರದ, ಸೊಂಡೂರು ಮಹೇಶ್ವರಪ್ಪ, ಸಿ.ಕೆ.ಬೋಜರಾಜ, ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ.ಶಿವಯೋಗಿ, ಕವಿ ಹಾ.ರಾ.ರಂಗನಾಥ, ರೇಖಾ, ಕವಿತಾ ಬಳೆಗಾರ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಅಧ್ಯಕ್ಷತೆ ವಹಿಸಿದ್ದರು. ಕವನ ಸಂಕಲನ ಕವಿಗಳು, ಕಸಾಪ ಸದಸ್ಯರು ಮತ್ತು ಕನ್ನಡಾಭಿಮಾನಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-43-1066589885

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.