ದಾವಣಗೆರೆ: ‘ಸ್ಪಷ್ಟವಾದ ಗುರಿ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ. ವೈದ್ಯರ ಜೀವನದಲ್ಲಿ ಪ್ರತಿದಿನವೂ ಕಲಿಕಾ ದಿನವಾಗಿದ್ದು, ಬೆಳೆಸಿದ ಪೋಷಕರು ಹಾಗೂ ಶಿಕ್ಷಣ ನೀಡಿದ ಗುರುಗಳನ್ನು ಎಂದಿಗೂ ಮರೆಯಬಾರದು’ ಎಂದು ಮೈಸೂರಿನ ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಡಾ. ಎಚ್. ಬಸವನಗೌಡ ಹೇಳಿದರು.

ನಗರದ ಬಾಪೂಜಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ 61ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

‘ನಮ್ಮಲ್ಲಿರುವ ದೌರ್ಬಲ್ಯಗಳು ಸಾಧನೆಗೆ ಅಡ್ಡಿಯಾಗಬಾರದು. ಅನೇಕ ಸಾಧಕರು ತಮ್ಮ ಜೀವನದಲ್ಲಿ ಎದುರಾದ ವೈಫಲ್ಯಗಳನ್ನು ಮೀರಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ’ ಎಂದರು.

‘ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ಪ್ರವೇಶ ಪಡೆದಿದ್ದು ನನ್ನ ಅದೃಷ್ಟವಾಗಿತ್ತು. ಇದೇ ಕಾಲೇಜಿನಲ್ಲಿ ಎಂ.ಡಿ. ಮೆಡಿಸಿನ್ ಪದವಿಯನ್ನೂ ಪೂರ್ಣಗೊಳಿಸಿದ್ದೆ. ಸಾಧನೆಗೆ ಕಾರಣರಾದ ಗುರುಗಳನ್ನು ಎಂದಿಗೂ ಮರೆಯುವುದಿಲ್ಲ’ ಎಂದು ಹೇಳಿದರು.

ಪ್ರಾಚಾರ್ಯರಾದ ಡಾ. ಶುಕ್ಲಾ ಎಸ್. ಶೆಟ್ಟಿ ಮಾತನಾಡಿ, ‘ಪದವಿ ಪ್ರದಾನವು ಶಿಕ್ಷಣದ ಅಂತ್ಯವಲ್ಲ, ಹೊಸ ಜೀವನದ ಆರಂಭವಾಗಿದೆ. ವೈದ್ಯರು ರೋಗಿಗಳೊಂದಿಗೆ ಪ್ರೀತಿ, ಕರುಣೆ ಮತ್ತು ಸಹಾನುಭೂತಿಯಿಂದ ವರ್ತಿಸಬೇಕು. ರೋಗಿಗಳು ಮತ್ತು ಅವರ ಕುಟುಂಬಸ್ಥರು ವೈದ್ಯರ ಮೇಲೆ ಅಪಾರ ನಂಬಿಕೆ ಇಟ್ಟಿರುತ್ತಾರೆ. ಆದ್ದರಿಂದ ವೈದ್ಯಕೀಯ ಸೇವೆಯನ್ನು ಮಾನವೀಯ ಮೌಲ್ಯಗಳೊಂದಿಗೆ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಫಾರ್ಮಕಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಎಲ್.ಡಿ. ಶ್ರೀನಿವಾಸ್ ಅವರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಹಿಪೊಕ್ರೆಟಿಕ್ ಪ್ರಮಾಣವಚನ ಬೋಧಿಸಿದರು.

ಐಎಬಿ ಅಧ್ಯಕ್ಷೆ ಡಾ. ಮಹಾಲಕ್ಷ್ಮಿ ಕೆಂಚೆ ಅಧ್ಯಕ್ಷೀಯ ಭಾಷಣ ಮಾಡಿದರು. ವೈದ್ಯಕೀಯ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ವರದೇಂದ್ರ ಕುಲಕರ್ಣಿ, ಐಎಬಿ ಅಧ್ಯಕ್ಷ ಡಾ. ಸುದೀಪ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಗಣ್ಯರು ಭಾಗವಹಿಸಿದ್ದರು. ಡಾ. ವಿವಿಯನ್ ಸ್ಯಾಮುಯಲ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-43-2143959477

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.