ದಾವಣಗೆರೆ: ತಂತ್ರಜ್ಞಾನದ ಅತಿಯಾದ ಬಳಕೆಯಿಂದ ಮಧುಮೇಹ ಹಾಗೂ ಬೊಜ್ಜಿನಂತಹ ಸಮಸ್ಯೆಗಳು ಚಿಕ್ಕ ವಯಸ್ಸಿನಲ್ಲಿಯೇ ಕಾಣಿಸಿಕೊಳ್ಳುತ್ತಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್ ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಸದ್ಯೋಜಾತ ಮಠದಲ್ಲಿ ‘ಆರ್ಟ್ ಆಫ್ ಲಿವಿಂಗ್’ ವತಿಯಿಂದ ಗುರುವಾರ ಆಯೋಜಿಸಿದ್ದ ‘ತೆರೆಮರೆಯ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಅವರು ಮಾತನಾಡಿದರು.

‘ಮಕ್ಕಳು ಆಟಗಳನ್ನು ಮರೆತು ಮೊಬೈಲ್ ಫೋನ್ ಹಿಡಿಯುತ್ತಿದ್ದಾರೆ. ಇದರಿಂದ ಜೀವನ ಶೈಲಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಆಧುನಿಕ ಜೀವನ ಶೈಲಿ ಹಾಗೂ ತಂತ್ರಜ್ಞಾನದ ಅತಿಯಾದ ಬಳಕೆ ಹಲವು ಸವಾಲುಗಳನ್ನು ತಂದೊಡ್ಡಿದೆ. ಮೊಬೈಲ್ ಫೋನ್ ಮೋಹ ತೊರೆಯುವ ಅಗತ್ಯವಿದೆ’ ಎಂದರು.

‘ಮೊಬೈಲ್ ಫೋನ್ ಬಳಕೆ ಇತ್ತೀಚೆಗೆ ವ್ಯಸನವಾಗಿ ಪರಿಣಮಿಸಿದೆ. ಮುಖಾಮುಖಿಯಾಗಿ ಮಾತನಾಡಲು ಯಾರಿಗೂ ಸಮಯವಿಲ್ಲದಂತೆ ಆಗಿದೆ. ಅಧ್ಯಾತ್ಮದ ಮೂಲಕ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ. ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದು ಕಿವಿಮಾತು ಹೇಳಿದರು.

ಮಕ್ಕಳ ತಜ್ಞ ಡಾ.ಬಾಣಾಪುರ ಮಠ್, ಕ್ರೀಡಾಪಟು ಎಂ.ಮಹೇಶ್ವರಯ್ಯ, ಹಾವೇರಿಯ ಡಾ.ಬಸವರಾಜ್ ವೀರಾಪುರ, ಗದಗಿನ ಮಾಲತಿ ಇನಾಮತಿ, ವಿಜಯಪುರದ ವಿಜಯ್ ರಾಜ್, ಧಾರವಾಡದ ಮಾರುತಿ ಪಾಟೀಲ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶರಣಾನಂದ ಶ್ರೀ ಸಾನ್ನಿಧ್ಯ ವಹಿಸಿದ್ದರು. ರವಿಕಾಂತ್, ಶಿಕ್ಷಕ ರವಿಕುಮಾರಗೌಡ, ಇಂದುಧರ್ ನಿಶಾನಿಮಠ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-43-89317884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.