ದಾವಣಗೆರೆ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮೇ 3 ರಂದು ಮಧ್ಯಾಹ್ನ 2ಕ್ಕೆ ಆರಂಭವಾಗಲಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಜಿಲ್ಲಾಡಳಿತ ಕಲ್ಪಿಸಿದೆ.

ಪರೀಕ್ಷೆ ಬರೆಯುವವರು ಬೆಳಿಗ್ಗೆ 11.30 ಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಪರಿಶೀಲಿಸಿ ಬಯೋಮೆಟ್ರಿಕ್ ದೃಢೀಕರಣ ಪಡೆಯಲಾಗುವುದು. ಬಳಿಕ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಪರೀಕ್ಷೆಯನ್ನು ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣದಿಂದ ಪರೀಕ್ಷಾ ಕೇಂದ್ರಗಳಿಗೆ ಸಾರಿಗೆ ವ್ಯವಸ್ಥೆಯನ್ನು ಬೆಳಿಗ್ಗೆ 9ರಿಂದ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-43-1571128085

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.