ದಾವಣಗೆರೆ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮೇ 3ರಂದು ನಡೆಯಲಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆಯ ತಾಪ ಹೆಚ್ಚಿರುವುದರಿಂದ ಪರೀಕ್ಷೆಯ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಕಡ್ಡಾಯವಾಗಿ ತರಬೇತಿ ನೀಡಬೇಕು’ ಎಂದರು.

ಕ್ಯಾಲ್ಕುಲೇಟರ್, ಸ್ಕೇಲ್, ರೈಟಿಂಗ್ ಪ್ಯಾಡ್, ಪೆನ್ ಡ್ರೈವ್, ಎರೇಸರ್, ಲಾಗ್ ಟೇಬಲ್, ಎಲೆಕ್ಟ್ರಾನಿಕ್ ಉಪಕರಣ, ಪೆನ್ ಸ್ಕ್ಯಾನರ್, ಮೊಬೈಲ್ ಫೋನ್, ಬ್ಲೂಟೂತ್, ಇಯರ್ಫೋನ್, ಮೈಕ್ರೋಫೋನ್, ಪೇಜರ್, ಹೆಲ್ತ್ ಬ್ಯಾಂಡ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

14 ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಕಂಪ್ಯೂಟರ್ ಕೇಂದ್ರಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ, ಪ್ರಥಮ ಚಿಕಿತ್ಸಕರ ತಂಡವನ್ನು ನಿಯೋಜಿಸಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣದಿಂದ ವಿಶೇಷ ನಗರ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ದಾವಣಗೆರೆಯಲ್ಲಿ 13 ಮತ್ತು ಹರಿಹರದಲ್ಲಿ 1 ಪರೀಕ್ಷಾ ಕೇಂದ್ರ ಇವೆ. 7,280 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. ಪ್ರತಿ ಕೊಠಡಿಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಇಡೀ ಪ್ರಕ್ರಿಯೆಯನ್ನು ವಿಡಿಯೋಗ್ರಫಿ ಮಾಡಲಾಗುವುದು ಎಂದು ನೀಟ್ ನೋಡಲ್ ಅಧಿಕಾರಿ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಡಿವೈಎಸ್ಪಿ ಶರಣಪ್ಪ, ಡಿಡಿಪಿಐ ಕೊಟ್ರೇಶ್, ಡಿಡಿಪಿಯು ಪಳಿನಿಸ್ವಾಮಿ, ಡಿಎಚ್ಒ ಡಾ.ಷಣ್ಮುಖಪ್ಪ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-43-1119190061

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.