ದಾವಣಗೆರೆ: ‘ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಚೈಲ್ಡ್ ಹೆಲ್ಪ್ಲೈನ್ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್ಲೈನ್ ವಂಚನೆಗಳ ಕುರಿತು ಜಾಗೃತಿ ಮೂಡಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿ ತಂತ್ರಜ್ಞಾನ ಆಧರಿತ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ‘ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್’ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಈ ಯೋಜನೆಗಾಗಿ ₹ 20 ಕೋಟಿ ಅನುದಾನವನ್ನು ಕೋರಲಾಗಿದ್ದು, ಪ್ರಾಥಮಿಕ ಹಂತವಾಗಿ ಕನಿಷ್ಠ ₹ 10 ಕೋಟಿ ಬಿಡುಗಡೆಯಾದರೂ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.

‘ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೂ, ಮುಂಬರುವ ಶೈಕ್ಷಣಿಕ ವರ್ಷಕ್ಕೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ತಿಂಗಳು ವಸತಿ ನಿಲಯಗಳಲ್ಲಿ ಸಂಜೆ ಅರ್ಧ ಗಂಟೆ ವಚನ ಸಾಹಿತ್ಯ, ದಲಿತ ಸಾಹಿತ್ಯ ಹಾಗೂ ಮಹಿಳಾ ಸಾಹಿತ್ಯದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಮುಂದಿನ ತಿಂಗಳಿಂದ ಸಂಸದರ ನೇತೃತ್ವದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಸಮಾಜ ಕಲ್ಯಾಣ, ಬಿಸಿಎಂ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ನಿಲಯಗಳಿಗೆ ಸ್ವಂತ ನಿವೇಶನಗಳನ್ನು ಮಂಜೂರು ಮಾಡಲಾಗಿದ್ದು, ಅನುದಾನ ಬಂದ ತಕ್ಷಣ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ವಸತಿ ನಿಲಯದ ಮಕ್ಕಳಿಗೆ ‘ಹೆಲ್ತ್ ಕಾರ್ಡ್’ ವಿತರಿಸಲಾಗುತ್ತಿದ್ದು, ಪ್ರತಿ ತಿಂಗಳು ಆರೋಗ್ಯ ತಪಾ ಸಣೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಫಲಿತಾಂಶದಲ್ಲಿ ಹಿಂದುಳಿದಿ ರುವ ಶಾಲೆಗಳನ್ನು ಅಧಿಕಾರಿಗಳು ದತ್ತು ಪಡೆದುಕೊಂಡು ಮೇಲ್ವಿಚಾರಣೆ ನಡೆಸುತ್ತಿದ್ದಾರೆ’ ಎಂದರು.

‘ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣವನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದ್ದು, ಪ್ರಸ್ತುತ ಇದು ರಾಜ್ಯದ ಸರಾಸರಿಗಿಂತ ಕಡಿಮೆ ಇರುವುದು ಜಿಲ್ಲೆಯ ದೊಡ್ಡ ಸಾಧನೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಚರ್ಮರೋಗ ತಜ್ಞರು, ಸ್ತ್ರೀರೋಗ ತಜ್ಞರು ಹಾಗೂ ಅರಿವಳಿಕೆ ತಜ್ಞರ ಹುದ್ದೆಗಳು ಖಾಲಿ ಇದ್ದು, ಲಭ್ಯವಿರುವ ಸಂಪನ್ಮೂಲಗಳಲ್ಲೇ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-43-1552123219

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.