ದಾವಣಗೆರೆ: ‘ನಗರದಲ್ಲಿರುವ ಕೆಲವು ಖಾಸಗಿ ಶಾಲೆಗಳು ಪೋಷಕರ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ತಾವು ಸೂಚಿಸುವ ಸಂಸ್ಥೆಗಳಿಂದಲೇ ಪಠ್ಯಪುಸ್ತಕಗಳನ್ನು ಖರೀದಿಸುವಂತೆ ಒತ್ತಡ ಹೇರುತ್ತಿವೆ. ಅಂತಹ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಉತ್ತರ ಮತ್ತು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.

‘ಮಧ್ಯಮ ವರ್ಗದ ಜನರು ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಕಷ್ಟಪಟ್ಟು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಆದರೆ, ಶಾಲೆಗಳು ಪೋಷಕರ ಆರ್ಥಿಕ ಪರಿಸ್ಥಿತಿಯ ಲಾಭ ಪಡೆಯುತ್ತಿವೆ. ಇಂತಹ ಶಾಲೆಗಳ ವಿರುದ್ಧ ಇಲಾಖೆ ಕೈಗೊಂಡಿರುವ ಕ್ರಮಗಳೇನು ಎಂಬ ಬಗ್ಗೆ ಮಾಹಿತಿ ನೀಡಬೇಕು’ ಎಂದು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

‘ಖಾಸಗಿ ಶಾಲೆಗಳು ಇಲಾಖೆಯ ಪರವಾನಗಿ ಮತ್ತು ನಿರಾಕ್ಷೇಪಣಾ ಪತ್ರವನ್ನು ನಿಯಮಬದ್ಧವಾಗಿ ನವೀಕರಿಸಿಕೊಂಡಿವೆಯೇ? ಶಾಲೆಗಳಲ್ಲಿ ಸಿ.ಸಿ.ಟಿವಿ ಮತ್ತು ಅಗ್ನಿಶಾಮಕದಂತಹ ಸುರಕ್ಷತಾ ಸೌಕರ್ಯಗಳು ಇವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ನಿಯಮಗಳನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಎಂ., ಪದಾಧಿಕಾರಿಗಳಾದ ಸಂತೋಷ್ ನಾಯ್ಕ, ವಿನಯ್, ಪ್ರಶಾಂತ್, ಕಿರಣ್ ಕುಮಾರ್, ಸುನೀಲ್, ಸಾಗರ್, ಪೃಥ್ವಿ, ಅಜಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-43-2069976239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.