ದಾವಣಗೆರೆ: ಇಲ್ಲಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾನುವಾರ ದೈವಜ್ಞ ಬ್ರಾಹ್ಮಣ ರೇವಣಕರ್ ಪರಿವಾರದಿಂದ ಎಸ್ಎಸ್ಎಲ್ಸಿಯಲ್ಲಿ ಶೇ 75ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ‘ದೈವಜ್ಞ ವಿದ್ಯಾಸಿರಿ’ ಜಿಲ್ಲಾ ಪ್ರಶಸ್ತಿ ಪ್ರದಾನ ಹಾಗೂ ದೈವಜ್ಞ ಸಮುದಾಯದ ಅಂಗವಿಕಲರಿಗೆ ಸಹಾಯ ಹಸ್ತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ‘ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯಾ ಸಮುದಾಯದಿಂದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ. ಮಕ್ಕಳು ಗುರು ಹಿರಿಯರು, ತಂದೆ –ತಾಯಿಗಳ ಮಾರ್ಗದರ್ಶನದಲ್ಲಿ ಸಂಸ್ಕಾರ ಕಲಿಯಬೇಕು’ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಜಯ್ ರೇವಣಕರ್, ‘ನಮ್ಮ ಪರಿವಾರದಿಂದ 2011 ರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಬಾರಿ 40 ಪ್ರತಿಭಾನ್ವಿತ ವಿದ್ಯಾರ್ಥಿಗಳು ಪುರಸ್ಕಾರ ಪಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ’ ಎಂದು ಹೇಳಿದರು.

‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವ ವಿದ್ಯಾರ್ಥಿಗಳನ್ನು ಕೇಳಿದರೂ ಶೇ 95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದೇವೆ ಎನ್ನುತ್ತಾರೆ. ಪ್ರತಿಭಾವಂತರು ಮುಂದಿನ ದಿನಗಳಲ್ಲಿ ಅಧಿಕಾರಿಗಳಾಗಿ ಸಮಾಜಕ್ಕೆ ಕೊಡುಗೆ ಕೊಡುವಂತವರಾಗಬೇಕು’ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಎ.ನಾಗರಾಜ ಹೇಳಿದರು.

ಪರಿವಾರದ ಅಧ್ಯಕ್ಷ ಮಂಜುನಾಥ ಎನ್.ರೇವಣಕರ್ ಅಧ್ಯಕ್ಷತೆ ವಹಿಸಿದ್ದರು. ಗೋವಾ ರೇವಣದ ವಿಮಲೇಶ್ವರ ಸಂಸ್ಥಾನದ ಅಧ್ಯಕ್ಷ ರಾಮನಾಥ ಪ್ರಭು ದೇಸಾಯಿ, ಪರಿವಾರದ ಸಂಸ್ಥಾಪಕ, ಗೌರವಾಧ್ಯಕ್ಷ ಡಾ.ನಲ್ಲೂರು ಅರುಣಾಚಲ ಎನ್.ರೇವಣಕರ್, ದೈವಜ್ಞ ಬ್ರಾಹ್ಮಣ ಸಮಾಜ ಸಂಘದ ಅಧ್ಯಕ್ಷ ಪ್ರಶಾಂತ್ ವಿ.ವೆರ್ಣೇಕರ್, ಮೈಸೂರಿನ ಮೀರಾ ನಾಗೇಶ ರೇವಣಕರ್, ಪರಿವಾರದ ಉಪಾಧ್ಯಕ್ಷ ದೇವಿದಾಸ್ ಸುಬ್ರಾಯ ರೇವಣಕರ್, ನಲ್ಲೂರು ರಾಘವೇಂದ್ರ, ಮದನ್, ಮಾರುತಿ, ರಾಮಚಂದ್ರ, ಅಶೋಕ ಸೇರಿದಂತೆ ಪರಿವಾರದ ಕಾರ್ಯಕಾರಿ ಮಂಡಳಿ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-43-723493097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.