ದಾವಣಗೆರೆ: ನಗರದ ಗುರು ಶಿವಯೋಗಿ ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾ ಚಟುವಟಿಕೆ, ಎನ್.ಎಸ್.ಎಸ್., ಯುವ ರೆಡ್ ಕ್ರಾಸ್ ಘಟಕದ ಸಮಾರೋಪ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಗುರು ಎಂ.ಸಿ. ಮಾತನಾಡಿ, ‘ವಿದ್ಯಾರ್ಥಿಗಳು ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗವನ್ನು ಸೃಷ್ಟಿಸುವತ್ತ ಗಮನಹರಿಸಬೇಕು. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಲೆಕ್ಕ ಪರಿಶೋಧಕರಾದ ಸಹನಾ ವಿ., ಸಿಂಘವಿ ದೇವ, ಉನ್ನಿ ಎಲ್ಎಲ್ಪಿ ಹಾಗೂ ಚಲನಚಿತ್ರ ನಟಿ ಕಾರುಣ್ಯಗೌಡ ಮಾತನಾಡಿದರು.

‘ವಿದ್ಯಾರ್ಥಿಗಳು 3 ವರ್ಷ ಏನು ಕಲಿತೆ ಎಂಬುದನ್ನು ಪರಾಮರ್ಶಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗಕ್ಕೆ ನಿಮ್ಮನ್ನು ನೀವು ತೆರೆದುಕೊಳ್ಳಬೇಕು. ಏನೂ ಪ್ರಯತ್ನ ಮಾಡದೇ, ಗುರುತಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷ ಬಿ.ಸಿ. ಶಿವಕುಮಾರ್ ಹೇಳಿದರು.

‘ಪ್ರತಿದಿನ ಹೊಸತನ್ನು ಕಲಿಯುತ್ತಾ ಹೋಗಬೇಕು. ಸಾಧನೆ ಮಾಡಲು ಮೊದಲು ತಾಳ್ಮೆ ಇರಬೇಕು’ ಎಂದರು.

ಎಸ್ಬಿಸಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಷಣ್ಮುಖ ಕೆ., ಅಥಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಯಾನ ದಿವ್ಯಾ, ಕಾಲೇಜಿನ ಉಪನ್ಯಾಸಕರು, ಕಚೇರಿ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-826983033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.