ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯ ಪಿಎಚ್.ಡಿ ಪ್ರವೇಶಕ್ಕೆ ಈಚೆಗೆ ನಡೆಸಿದ ಪರೀಕ್ಷೆಯಲ್ಲಿ ಇತಿಹಾಸ ವಿಭಾಗದ ಪ್ರಶ್ನೆ ಪತ್ರಿಕೆಯಲ್ಲಿ 50 ಪ್ರಶ್ನೆಗಳಿಗೆ ಒಂದೇ ಆಯ್ಕೆಯ ‘ಕೀ’ ಉತ್ತರ ಇರುವುದು ಅನುಮಾನ ಮೂಡಿಸಿದೆ.

ದಾವಣಗೆರೆ ವಿಶ್ವವಿದ್ಯಾಲಯವು 177 ಪಿಎಚ್.ಡಿ ಸೀಟುಗಳಿಗೆ ಪ್ರವೇಶ ಪರೀಕ್ಷೆಗೆ ಫೆಬ್ರುವರಿಯಲ್ಲಿ ಅರ್ಜಿ ಆಹ್ವಾನಿಸಿತ್ತು. ಮಾರ್ಚ್ 27ರಂದು ಪ್ರವೇಶ ಪರೀಕ್ಷೆ ನಡೆದಿತ್ತು. ಇದರ ‘ಕೀ’ ಉತ್ತರ ಪ್ರಕಟಗೊಂಡ ಬಳಿಕ ಅಕ್ರಮದ ಶಂಕೆ ವ್ಯಕ್ತವಾಗಿದೆ.

100 ಅಂಕಗಳ ಬಹು ಆಯ್ಕೆ ಮಾದರಿಯ ಪ್ರಶ್ನೆಪತ್ರಿಕೆಯಲ್ಲಿ ಮೊದಲ 20 ಪ್ರಶ್ನೆಗಳಿಗೆ ‘ಎ’ ಉತ್ತರವಿದೆ. ಎರಡನೇ 20 ಪ್ರಶ್ನೆಗಳಲ್ಲಿ ಒಂದು ಪ್ರಶ್ನೆ ಹೊರತುಪಡಿಸಿ ಉಳಿದ 19ಕ್ಕೆ ‘ಬಿ’ ಉತ್ತರವಿದೆ. ಪ್ರಶ್ನೆ ಪತ್ರಿಕೆ ರೂಪಿಸಿರುವುದು ಅನುಮಾನಾಸ್ಪದವಾಗಿದೆ. ನಿಯಮಗಳನ್ನು ಗಾಳಿಗೆ ತೂರಿ ಪ್ರಶ್ನೆ ಪತ್ರಿಕೆ ರೂಪಿಸಿರುವ ಆರೋಪ ಕೇಳಿಬಂದಿದೆ.

ಈ ನಡುವೆ ದಾವಣಗೆರೆ ವಿಶ್ವವಿದ್ಯಾಲಯ ಮಂಗಳವಾರ ಪಿಎಚ್.ಡಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಆಧಿಸೂಚನೆ ಪ್ರಕಟಿಸಿದೆ.

‘ಇತಿಹಾಸ ಅಧ್ಯಯನ ವಿಭಾಗ ಹೊರತುಪಡಿಸಿ ಪಿಎಚ್.ಡಿ. ಪದವಿಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಬೇಕು. ನಿಗದಿತ ದಿನಾಂಕದೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-43-890649127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.