ದಾವಣಗೆರೆ: ಇಲ್ಲಿನ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಅಧ್ಯಯನ ವಿಭಾಗ ಹಾಗೂ ಭಾರತೀಯ ಭಾಷಾ ಕೇಂದ್ರದ ಆಶ್ರಯದಲ್ಲಿ ಜೂನ್ 2 ರಿಂದ 4ರ ವರೆಗೆ ಕನ್ನಡ, ತೆಲುಗು, ಉರ್ದು ಸೇರಿದಂತೆ ಭಾರತೀಯ ಭಾಷೆಗಳ ಭಾಷಾಂತರ ಕೌಶಲ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಪ್ರೊ. ಪಕ್ಕೀರೇಶ ಹಳ್ಳಳ್ಳಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ. ಎವಿಕೆ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾದ ಡಾ. ಅನುರಾಧ ಪಿ.ಎಂ. ಕಾರ್ಯಕ್ರಮ ಉದ್ಘಾಟಿಸಲಿದ್ದು, ದಾವಣಗೆರೆ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರಿನ ರಾಷ್ಟ್ರೀಯ ಅನುವಾದ ಮಿಷನ್ನ ಹಿರಿಯ ಕರೆಸ್ಪಾಂಡೆಂಟ್ ಪ್ರೊ. ಉಷಾರಾಣಿ ಶಿಬಿರದಲ್ಲಿ ಮಾತನಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಎಸ್.ಬಿ. ಘಂಟಿ, ಮೌಲ್ಯಮಾಪನ ರಿಜಿಸ್ಟ್ರಾರ್ ಪ್ರೊ. ಸಿ.ಕೆ. ರಮೇಶ್, ಹಣಕಾಸು ಅಧಿಕಾರಿ ಪ್ರೊ. ಆರ್.ಶಶಿಧರ, ಕಲಾ ವಿಭಾಗದ ಡೀನ್ ಲೋಕೇಶ್ ಎಂ.ಯು., ಪ್ರೊ.ರವಿಕುಮಾರ್ ಕುಂಬಾರ್, ಪ್ರೊ. ಮದಕರಿನಾಯಕ ಎಚ್.ಆರ್., ಪ್ರೊ. ಯಜ್ಞಶ್ರೀ ಎಸ್. ಹಾಗೂ ಇಂಗ್ಲಿಷ್ ಅಧ್ಯಯನ ವಿಭಾಗ ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-43-2140901171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.