ದಾವಣಗೆರೆ: ‘ವಿಶ್ವವಿದ್ಯಾಲಯದ ಆಡಳಿತ ನಡೆಸುವುದು ಕುಲುಮೆಯಲ್ಲಿ ಕುಳಿತುಕೊಂಡಂತೆ. ಕಠಿಣ ಪರಿಸ್ಥಿತಿಯಲ್ಲೂ ಪ್ರೊ.ಬಿ.ಡಿ. ಕುಂಬಾರ ಅವರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದಾರೆ’ ಎಂದು ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಬಿ. ಬಕ್ಕಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿನ ದೃಶ್ಯಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅವರಿಗೆ ನಾಗರಿಕ ಸನ್ಮಾನ ಸಮಿತಿ ಬುಧವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕುಂಬಾರ ಅವರ ಆಡಳಿತಾವಧಿಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಹತ್ತರ ಮೈಲುಗಳನ್ನು ತಲುಪಿದೆ. ಉನ್ನತ ಶಿಕ್ಷಣ, ಅಧ್ಯಯನ ಹಾಗೂ ಸಂಶೋಧನೆಗೆ ಸಾಕಷ್ಟು ಆದ್ಯತೆ ದೊರಕಿದೆ. ಸಂಶೋಧನಾರ್ಥಿಗಳು ಯಾವ ವಿಷಯಕ್ಕೆ ಒತ್ತು ನೀಡಬೇಕು ಎಂಬ ಮಾರ್ಗದರ್ಶನವನ್ನೂ ಕುಲಪತಿ ನೀಡಿದ್ದಾರೆ’ ಎಂದು ಕೊಂಡಾಡಿದರು.

‘ದಾವಣಗೆರೆ ವಿ.ವಿ ಪ್ರಾಧ್ಯಾಪಕರು ದೇಶದ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ವಿದೇಶಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆ ಮಾಡುವ ಸಾಮರ್ಥ್ಯವನ್ನು ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬೆಳೆಸಿಕೊಂಡಿದ್ದಾರೆ. ಸಂಶೋಧನೆ ಹಾಗೂ ವಿಸ್ತರಣಾ ಸೇವೆಗಳಿಗೆ ಕುಲಪತಿ ನೀಡಿದ ಒತ್ತು ಈ ಸಾಧನೆಗೆ ಪ್ರೇರಣೆ’ ಎಂದು ಎಚ್.ವಿ. ವಾಮದೇವಪ್ಪ ಅಭಿಪ್ರಾಯಪಟ್ಟರು.

‘ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತೆರೆದ ತರಬೇತಿ ಕೇಂದ್ರ ಮಾದರಿಯಾಗಿದೆ. ಕೇಂದ್ರೀಯ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಸೌಲಭ್ಯ ಕಲ್ಪಿಸಿದ್ದು ಅಭಿನಂದನಾರ್ಹ’ ಎಂದರು.

ಮೇ 31ಕ್ಕೆ ಕುಲಪತಿ ಅವಧಿ ಪೂರ್ಣಗೊಳಿಸಲಿರುವ ಪ್ರೊ.ಬಿ.ಡಿ. ಕುಂಬಾರ ಅವರ ಕುರಿತು ಹೊರತಂದಿರುವ ‘ಅಭಿನಂದನಾ ಗ್ರಂಥ’ವನ್ನು ಬಿಡುಗಡೆ ಮಾಡಲಾಯಿತು.

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಸಮರ್ಥ್ ಶಾಮನೂರು, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ. ಸಿದ್ಧಪ್ಪ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಎಸ್.ಆರ್. ನಿರಂಜನ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಂ. ರಾಮಚಂದ್ರೇಗೌಡ, ರಾಜ್ಯ ಕಾಲೇಜು ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಸಿ.ಎಚ್. ಮುರಿಗೇಂದ್ರಪ್ಪ, ಎಸ್.ಬಿ. ಹಿರೇಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-43-908684643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.