ದಾವಣಗೆರೆ: 1951ರಲ್ಲಿ ಆರಂಭ ವಾಗಿರುವ ಇಲ್ಲಿನ ಸರ್ಕಾರಿ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿಗೆ 75 ವಸಂತಗಳು ತುಂಬಿರುವ ಅಂಗವಾಗಿ ಹಮ್ಮಿಕೊಂಡಿರುವ ಅಮೃತ ಮಹೋತ್ಸವ ಸಮಾರಂಭದ ಉದ್ಘಾಟನೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 29ರಂದು ನಗರಕ್ಕೆ ಆಗಮಿಸಲಿದ್ದಾರೆ.

‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ವ್ಯಾಪ್ತಿಯಲ್ಲಿರುವ ಬಿಡಿಟಿ ಕಾಲೇಜು ರಾಜ್ಯದ ಹಳೆಯ ತಾಂತ್ರಿಕ ಕಾಲೇಜುಗಳಲ್ಲೊಂದು. ಶುಕ್ರವಾರ ಮಧ್ಯಾಹ್ನ 12.20ಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿ, ಮಧ್ಯಾಹ್ನ 3.30ಕ್ಕೆ ಶಿವಮೊಗ್ಗಕ್ಕೆ ತೆರಳಲಿದ್ದಾರೆ’ ಎಂದು ಕುಲಪತಿ ಎಸ್. ವಿದ್ಯಾಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಅಮೃತ ಮಹೋತ್ಸವದ ಅಂಗವಾಗಿ ₹10 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲಾಗುತ್ತಿದೆ. 8 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ನಿರ್ಮಿಸುವ ಉದ್ದೇಶವಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-4-1631427993

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.