ದಾವಣಗೆರೆ: ‘ಹೆಣ್ಣುಮಕ್ಕಳು ನಿತ್ಯದ ಜವಾಬ್ದಾರಿಗಳ ನಡುವೆಯೂ ತಮ್ಮ ಆರೋಗ್ಯ, ಮನಃಶಾಂತಿ ಹಾಗೂ ವೈಯಕ್ತಿಕ ಶ್ರೇಯೋಭಿವೃದ್ಧಿಗಾಗಿ ಪ್ರತಿದಿನ ಸ್ವಲ್ಪ ಸಮಯ ಮೀಸಲಿಡಬೇಕು’ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.

ಜೆಜೆಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಆಡಿಟೋರಿಯಂನಲ್ಲಿ ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ‘ಮಿಸ್ ಪಾರ್ವತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಎಲ್ಲರ ಏಳಿಗೆಯಲ್ಲಿ ತಮ್ಮ ಏಳಿಗೆ ಕಾಣುವ ಮಹಿಳೆಯರು ಕುಟುಂಬ ಹಾಗೂ ಸಮಾಜದ ಒಳಿತಿಗಾಗಿ ನಿರಂತರವಾಗಿ ಶ್ರಮಿಸುತ್ತಾರೆ. ಈ ಜವಾಬ್ದಾರಿಗಳ ನಡುವೆಯೂ ವೈಯಕ್ತಿಕ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿಗೆ ಆದ್ಯತೆ ನೀಡಬೇಕು. ಇದರಿಂದ ಸಮಾಜಕ್ಕೆ ಇನ್ನಷ್ಟು ಅಮೂಲ್ಯ ಕೊಡುಗೆ ನೀಡಲು ಸಾಧ್ಯ’ ಎಂದರು.

‘ಬಾಪೂಜಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸುವಲ್ಲಿ ಶಾಮನೂರು ಶಿವಶಂಕರಪ್ಪಾಜಿಯ ಪರಿಶ್ರಮ ಅಪಾರವಾಗಿದೆ. ಸಿಬ್ಬಂದಿ ವರ್ಗದವರ ಸಹಕಾರದಿಂದ ಸಂಸ್ಥೆ ಮತ್ತಷ್ಟು ಬೆಳೆದಿದೆ’ ಎಂದರು.

‘ಸಂಸ್ಥೆಯ ಸಿಬ್ಬಂದಿ ವರ್ಗದವರ ಮನವಿಯ ಮೇರೆಗೆ ಹೆರಿಗೆ ರಜೆಯನ್ನು 180 ದಿನಗಳಿಗೆ ವಿಸ್ತರಿಸುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

‘ರಾಜ್ಯ ಸರ್ಕಾರದಿಂದ ಎಚ್ಪಿವಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಮಹಿಳೆಯರು ತಪ್ಪದೇ ಲಸಿಕೆ ಪಡೆಯಬೇಕು. ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವಲ್ಲಿ ಈ ಲಸಿಕೆ ಪರಿಣಾಮಕಾರಿ’ ಎಂದು ತಿಳಿಸಿದರು.

‘ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಮಹಿಳಾ ಸಿಬ್ಬಂದಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸುವ ಯೋಜನೆಯಿದ್ದು, ಜೂನ್ ಅಂತ್ಯದೊಳಗೆ ಈ ಕಾರ್ಯ ಪೂರ್ಣಗೊಳಿಸುವ ಆಲೋಚನೆ ಇದೆ’ ಎಂದರು.

ಬಿಇಎ ಆಡಳಿತ ಮಂಡಳಿ ಸದಸ್ಯೆ ಕಿರುವಾಡಿ ಗಿರಿಜಮ್ಮ, ವಿವಿಧ ಕಾಲೇಜುಗಳ ಪ್ರಾಂಶುಪಾಲರಾದ ಜೆ.ಎಸ್. ವನಿತಾ, ಡಾ. ಶುಕ್ಲಾ ಶೆಟ್ಟಿ, ಕಮಲಾ ಸೊಪ್ಪಿನ್, ಡಾ. ಪುಷ್ಪಲತಾ ನಾಡಿಗ್, ಎಂ.ಪಿ. ರೂಪಶ್ರೀ ಹಾಗೂ ಡಾ. ಎಚ್.ಪಿ. ವಿನುತಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-43-1606884898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.