ಬುಧವಾರ, ಸೆಪ್ಟೆಂಬರ್ 22, 2021
21 °C

ವಿದ್ಯಾರ್ಥಿ ವೇತನ: ಎನ್‌ಎಸ್‌ಪಿ, ಡಿಇಇಇ ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH Photo

ಎನ್‌ಐಟಿ ತಿರುಚಿರಾಪಲ್ಲಿ ಡಿಪಾರ್ಟ್‌ಮೆಂಟ್‌ ಆಫ್‌ ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌ (ಡಿಇಇಇ) ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌ 2021

ವಿವರ: ಬಿಇ/ ಬಿಟೆಕ್‌ ಮಾಡಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: 30 ವರ್ಷದ ಒಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಲೆಕ್ಟ್ರಾನಿಕ್ಸ್‌/ ಪವರ್‌ ಸಿಸ್ಟಮ್‌/ ಸಿಎಸ್‌ಇ ಯಲ್ಲಿ ಎಂ.ಇ/ ಎಂ.ಟೆಕ್‌ ಮುಗಿಸಿರಬೇಕು. ಈ ಪದವಿಗಳಿಗೆ ನಡೆದ ಪರೀಕ್ಷೆಗಳಲ್ಲಿ ಕನಿಷ್ಠ ಶೇ 70ರಷ್ಟು ಅಂಕ ಪಡೆದಿರಬೇಕು.

ಆರ್ಥಿಕ ಸಹಾಯ: ತಿಂಗಳಿಗೆ 31 ಸಾವಿರದ ಜತೆಗೆ ಎಚ್‌ಆರ್‌ಎ ಶೇ 16ರಷ್ಟು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/DER3

ಎನ್‌ಎಸ್‌ಪಿ ಪ್ರೀ ಸ್ಕಾಲರ್‌ಶಿಪ್‌ ಸ್ಕೀಮ್‌ ಫಾರ್‌ ಮೈನಾರಿಟೀಸ್‌ 2021–22

ವಿವರ: ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌, ಬೌದ್ಧರು, ಜೈನ, ಪಾರ್ಸಿ ಸಮುದಾಯದ ಮಕ್ಕಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸಮುದಾಯದ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂತಿಮ ಪರೀಕ್ಷೆಗಳಲ್ಲಿ ಶೇ 50ರಷ್ಟು ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹ 1 ಲಕ್ಷಕ್ಕಿಂತ ಕಡಿಮೆ ಇರಬೇಕು.

ಆರ್ಥಿಕ ಸಹಾಯ: ದಾಖಲಾತಿ ಶುಲ್ಕ, ಟ್ಯೂಷನ್‌ ಶುಲ್ಕ ಮತ್ತು ನಿರ್ವಹಣಾ ಖರ್ಚು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ನವೆಂಬರ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/PRM6

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು