ದೇವನಹಳ್ಳಿ: ತಾಲ್ಲೂಕಿನ ಬೆಟ್ಟಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎಸ್ಡಿಎಂಸಿ ಸ್ಥಾಪನೆ 25ನೇ ವರ್ಷದ ಬೆಳ್ಳಿಹಬ್ಬವನ್ನು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ವೇದಿಕೆ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.

‘ಸರ್ಕಾರಿ ಶಾಲೆ ಉಳಿಯಲಿ, ಬೆಳೆಯಲಿ; ನೆರೆಹೊರೆ ಸಮಾನ ಶಾಲೆಯಾಗಲಿ’ ಎಂಬ ಆಶಯದೊಂದಿಗೆ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮವನ್ನು ಎಸ್ಡಿಎಂಸಿ ತಜ್ಞ ಡಾ.ನಿರಂಜನ ಆರಾಧ್ಯ, ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಎಸ್ಡಿಎಂಸಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪೋಷಕರು, ಶಿಕ್ಷಕರು ಮತ್ತು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ರೂಪುಗೊಳ್ಳಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ ಮಾತನಾಡಿ, ‘ಸರ್ಕಾರದ ವಿವಿಧ ಶಿಕ್ಷಣ ಯೋಜನೆಗಳು ಸಮರ್ಪಕವಾಗಿ ಜಾರಿಗೊಳ್ಳಲು ಸ್ಥಳೀಯ ಮಟ್ಟದ ಸಮಿತಿಗಳ ಸಹಕಾರ ಅಗತ್ಯ. ಮಕ್ಕಳ ದಾಖಲಾತಿ ಹೆಚ್ಚಿಸುವುದು, ಹಾಜರಾತಿ ಕಾಪಾಡುವುದು ಮತ್ತು ಮೂಲಸೌಕರ್ಯ ಅಭಿವೃದ್ಧಿಪಡಿಸುವಲ್ಲಿ ಎಸ್ಡಿಎಂಸಿ ಚುರುಕಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.

ಬಿಇಒ ಲಲಿತಮ್ಮ ‘ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಮೂಡಿಸುವ ಜವಾಬ್ದಾರಿ ಎಲ್ಲರದ್ದಾಗಿದೆ. ಗುಣಮಟ್ಟದ ಶಿಕ್ಷಣ, ಉತ್ತಮ ವಾತಾವರಣ ಮತ್ತು ಸಮಾನ ಅವಕಾಶ ಒದಗಿಸುವ ಮೂಲಕ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳೊಂದಿಗೆ ಸ್ಪರ್ಧಿಸುವ ಮಟ್ಟಕ್ಕೆ ಅಭಿವೃದ್ಧಿ ಹೊಂದಬೇಕು’ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ವಿಠ್ಠಲ್ ಕಾಂಬಳೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಬೆಟ್ಟಕೋಟೆ ಶಾಲೆ ಎಸ್ಡಿಎಂಸಿ ಅಧ್ಯಕ್ಷ ರವಿ ಅಧ್ಯಕ್ಷತೆ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-15-445097007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.