ದೇವನಹಳ್ಳಿ: ಸಮಾಜ ಸುಧಾರಕ, ಕ್ರಾಂತಿಕಾರಿ ಶಿಕ್ಷಕ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಎಐಡಿಎಸ್ಓ ವತಿಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಜ್ಯೋತಿರಾವ್ ಫುಲೆ ಅವರ ಜೀವನ ಹಾಗೂ ಸಾಮಾಜಿಕ ಹೋರಾಟ ಕುರಿತು ವಿವರಿಸಲಾಯಿತು. ಸಮಾಜದ ವಿರೋಧದ ನಡುವೆಯೂ ಹೆಣ್ಣುಮಕ್ಕಳು ಹಾಗೂ ಹಿಂದುಳಿದ ವರ್ಗದ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಫುಲೆ ಅವರ ಕೊಡುಗೆಗಳನ್ನು ಸ್ಮರಿಸಲಾಯಿತು.

ಶಿಕ್ಷಣವು ಪ್ರತಿಯೊಬ್ಬರಿಗೂ ಉಚಿತವಾಗಿ ಮತ್ತು ಸಮಾನವಾಗಿ ದೊರಕಬೇಕು ಎಂಬುದು ಫುಲೆ ಅವರ ಆಶಯವಾಗಿತ್ತು ಎಂದು ತಿಳಿಸಲಾಯಿತು.

ಶಿಬಿರದಲ್ಲಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಸದಸ್ಯ ನವಾಜ್, ಇಂದಿನ ಯಾಂತ್ರಿಕ ಯುಗದಲ್ಲಿ ಮಕ್ಕಳಿಗೆ ಅಂಕ ಕೇಂದ್ರಿತ ಶಿಕ್ಷಣ ನೀಡಲಾಗುತ್ತಿದೆ. ಆದರೆ ಮಹಾನ್ ವ್ಯಕ್ತಿಗಳ ಹೋರಾಟದ ಬದುಕು ಹಾಗೂ ಅವರು ಪಾಲಿಸಿದ ನೈತಿಕ ಮೌಲ್ಯ ಪರಿಚಯಿಸುವುದರಿಂದ ಮಾತ್ರ ಸದೃಢ ವ್ಯಕ್ತಿತ್ವ ರೂಪಿಸಲು ಸಾಧ್ಯ ಎಂದು ಹೇಳಿದರು.

ಸರ್ಕಾರ ಶಿಕ್ಷಣವನ್ನು ವ್ಯಾಪಾರೀಕರಣ ಮಾಡುತ್ತಿವೆ. ‘ಕೆಪಿಎಸ್ ಮ್ಯಾಗ್ನೆಟ್’ ಹೆಸರಿನಲ್ಲಿ ಸಾವಿರಾರು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮುಚ್ಚಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಮೊಬೈಲ್ ಗೀಳು, ಅಶ್ಲೀಲ ಸಂಸ್ಕೃತಿ ಹಾಗೂ ಮಾದಕ ವ್ಯಸನಗಳು ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿಯಾಗಿವೆ ಎಂದೂ ಅವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯ ಜಯಣ್ಣ ಅವರು ಟಿ.ಪಿ. ಕೈಲಾಸಂ ಅವರ ‘ಪೋಲಿ ಕಿಟ್ಟಿ’ ಕಥೆಯನ್ನು ಮಕ್ಕಳಿಗೆ ಹೇಳುವ ಮೂಲಕ ಮಾನವೀಯ ಮೌಲ್ಯಗಳ ಅಗತ್ಯತೆಯನ್ನು ತಿಳಿಸಿದರು.

ಶಿಬಿರದಲ್ಲಿ ನಾಟಕದ ಆಟಗಳು, ಹಾಡುಗಳು ಹಾಗೂ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ದುರ್ಗೇಶ್, ಶ್ರೀನಿವಾಸ್ ಮೂರ್ತಿ, ಆನಂದ್, ಎಚ್.ವಿ.ಗೀತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-15-853930558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.