ದೇವನಹಳ್ಳಿ: ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೇವೆ ಸಿಗುವಂತೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ವಾಸಂತಿ ಅಮರ್ ಸೂಚಿಸಿದರು.

ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ 3ನೇ ಮತ್ತು 4ನೇ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.

ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ನಡೆಸಬೇಕು. ಇದರಿಂದ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆ ಆರಂಭಿಕ ಹಂತದಲ್ಲೇ ಪತ್ತೆಯಾಗುತ್ತದೆ. ಸಕಾಲದಲ್ಲಿ ಚಿಕಿತ್ಸೆ ನೀಡುವುದರಿಂದ ಗಂಭೀರ ಸಮಸ್ಯೆ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಹೇಳಿದರು.

ಹೃದಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸೆ ಹಾಗೂ ಅಗತ್ಯ ಶಸ್ತ್ರಚಿಕಿತ್ಸೆ ಕಲ್ಪಿಸುವ ಮೂಲಕ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-15-658757710

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.