ಧರ್ಮಾಪುರ: ‘ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು, ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ, ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಧರ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಾಣಿ ತಿಳಿಸಿದರು.

ಸೋಮವಾರ ನಡೆದ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರಸಕ್ತ ಸಾಲಿನಲ್ಲಿ ಈ ಶಾಲೆಯಲ್ಲಿ 1–5ನೇ ತರಗತಿಯವರೆಗೆ ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಮಕ್ಕಳಿಗೆ ಬೋಧಿಸ ಲಾಗುವುದು’ ಎಂದು ಸಿಆರ್ಪಿ ಶಿವಪ್ಪ ತಿಳಿಸಿದರು.

ಅತಿಥಿ ಉಪನ್ಯಾಸಕ ಪರಮೇಶ ಅವರು ಎಲ್ಕೆಜಿ ಕೊಠಡಿಯನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಸ್ವಾಮಿನಾಯಕ, ಉಪಾಧ್ಯಕ್ಷೆ ನವ್ಯಾ, ಸದಸ್ಯರಾದ ವೆಂಕಟೇಶ, ಪುಟ್ಟಬುದ್ದಿ, ಮಹೇಶ, ವೆಂಕಟೇಶ, ರಮೇಶ, ಬಸವರಾಜು, ಕೆಂಡಗಣ್ಣ ಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-38-2143709807

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.