ಧಾರವಾಡ: ‘ಅಸ್ಪೃಶ್ಯತೆ ಮತ್ತು ಜಾತಿ ಪದ್ದತಿ ನಿರ್ಮೂಲನೆಗೆ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರು ಶ್ರಮಿಸಿದರು’ ಎಂದು ಜೆಎಸ್ಎಸ್ ಕಾರ್ಯದರ್ಶಿ ಅಜಿತ ಪ್ರಸಾದ ಹೇಳಿದರು.

ಜೆಎಸ್ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಐ.ಟಿ.ಐ ಕಾಲೇಜು ಮತ್ತು ಎಂಸಿಎ ಕಾಲೇಜು ವತಿಯಿಂದ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

‘ಅಂಬೇಡ್ಕರ್ ಅವರು ದಲಿತರ ಧ್ವನಿಯಾಗಿ, ಸ್ವಾತಂತ್ರ್ಯ ಪೂರ್ವ ಹಾಗೂ ನಂತರ ದಿನಗಳಲ್ಲಿ ಸತತವಾಗಿ ಹೋರಾಡಿದರು. ಸಂವಿಧಾನ ರಚಿಸಿ ಸಮಾನತೆ ಸಾರಿದರು. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪ್ರಯತ್ನಿಸಬೇಕು’ ಎಂದರು.

ಪ್ರಾಧ್ಯಾಪಕ ಆರ್.ವಿ. ಚಿಟಗುಪ್ಪಿ ಮಾತನಾಡಿ, ‘ಶೋಷಿತರು ಇಂದು ಸಮಾಜದಲ್ಲಿ ಒಳ್ಳೆಯ ಜೀವನ ನಡೆಸಲು ಅಂಬೇಡ್ಕರ್ ಅವರ ಹೋರಾಟವೇ ಕಾರಣ. ಸಮಾಜದಲ್ಲಿ ಸಮಾನತೆ ತರಬೇಕಾದರೆ ಎಲ್ಲರಿಗೂ ಶಿಕ್ಷಣ ದೊರೆಯಬೇಕು’ ಎಂದರು.

ಜೆಎಸ್ಎಸ್ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾದ್ಯೆ, ಜ್ಯೋತಿ ಅಕ್ಕಿ, ಶೃತಿ ಶೆಟ್ಟಿ, ರೋನಿಲ್ ಮನೋಹರ್, ಶಿಲ್ಪಾ ನಾಯಕ್, ಮುರಳಿಧರ್ ಹೆಗಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-24-1423859195

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.