ಧಾರವಾಡ: ‘ದೇಶದ ಎಲ್ಲಾ ವರ್ಗದ ಮಹಿಳೆಯರಿಗೆ ಸಮಾಜದಲ್ಲಿ ಗೌರವಯುತವಾಗಿ ಬದಕಲು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಕ್ಕುಗಳನ್ನು ನೀಡಿ, ಅವರನ್ನು ಸಮಾಜದಲ್ಲಿ ಮುಖ್ಯ ವಾಹಿನಿಗೆ ತರಲು ಬಾಬಾಸಾಹೇಬ್ ಅಂಬೇಡ್ಕರ್ ಶ್ರಮಿಸಿದ್ದಾರೆ’ ಎಂದು ಬೆಂಗಳೂರಿನ ಮನಮೋಹನ್ ಸಿಂಗ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಮೇಶ.ಬಿ ಹೇಳಿದರು.

ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ವಿಭಾಗ ವತಿಯಿಂದ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಶನಿವಾರ ‘ಭಾರತದಲ್ಲಿ ಮಹಿಳಾ ಸಬಲೀಕರಣಕ್ಕೆ ಬಿ.ಅರ್. ಅಂಬೇಡ್ಕರ್ ಅವರ ಕೊಡುಗೆಗಳು’ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.

‘ದೇಶ ಅಭಿವೃದ್ಧಿ ಆಗಬೇಕಾದರೆ ಅದು ಮಹಿಳೆಯರ ಅಭಿವೃದ್ಧಿಗೆ, ಬೆಳವಣಿಗೆ ಮೇಲೆ ಅವಲಂಬಿತವಾಗಿದೆ ಎಂದು ಅಂಬೇಡ್ಕರ್ ನಂಬಿದ್ದರು. ಹಿಂದು ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಹಕ್ಕು ಸೇರಿದಂತೆ ಅನೇಕ ಹಕ್ಕುಗಳನ್ನು ನೀಡಿದರು. ಧಾರ್ಮಿಕ ಆಚರಣೆಯ ಮೂಲಕ ಬಾಲ್ಯವಿವಾಹ ಪದ್ದತಿಯಿಂದ ಮಹಿಳೆಯನ್ನು ಶೋಷಣೆ ಒಳಪಡಿಸಲಾಗುತ್ತದೆ ಎಂದು ಅಂಬೇಡ್ಕರ್ ಅವರು ವೈಜ್ಞಾನಿಕವಾಗಿ ವಿಶ್ಲೇಷಣೆ ಮಾಡಿದ್ದಾರೆ’ ಎಂದರು.

ಚಿಕ್ಕೋಡಿ ಉದ್ಯಮಿ ಅರವಿಂದ ಘಟ್ಟಿ ಮಾತನಾಡಿ, ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ಇಂದಿನ ಯುವಕರು ಅರಿಯಬೇಕು. ಅವರ ಆಶಯದಂತೆ ವಿದ್ಯಾರ್ಥಿಗಳಿಗೆ ಹಲವಾರು ಚಟುವಟಿಕೆಗಳನ್ನು ಕೈಗೊಂಡಿದ್ದೇವೆ’ ಎಂದರು.

ಕೃತಿ ಬಿಡುಗಡೆ: ‘ಅಕ್ಷರ ಸೂರ್ಯ’, ಎಂಬ ಸಂಶೋಧನಾ ನಿಯತಕಾಲಿಕೆ ಮತ್ತು ಸಂಶೋಧಕ ತರುಣ ದೊಡಮನಿ ಅವರ ‘ಬಿ.ಆರ್.ಅಂಬೇಡ್ಕರ್ ಆನ್ ಪಬ್ಲಿಕ್ ಫೈನಾನ್ಸ್’ ಎಂಬ ಕೃತಿ ಬಿಡುಗಡೆಗೊಳಿಸಲಾಯಿತು.

ಬಹುಮಾನ ವಿತರಣೆ: ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕ್ರಾಂತಿ ಗೀತೆ, ರಸಪ್ರಶ್ನೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಕುಲಪತಿ ಪ್ರೊ.ಎ.ಎಂ.ಖಾನ್ ಅಧ್ಯಕ್ಷತೆ ವಹಿಸಿದ್ದರು. ಪರೀಕ್ಷಾಂಗ ಕುಲಸಚಿವ ಎನ್. ವೈ. ಮಟ್ಟಿಹಾಳ, ಸಿಂಡಿಕೇಟ್ ಸದಸ್ಯ ಮಹೇಶ ಹುಲ್ಲನ್ನವರ, ಕವಿವಿ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯೋಜಕ ಸುಭಾಸಚಂದ್ರ ನಾಟೀಕಾರ,ಸದಾಶಿವ ಮರ್ಜಿ, ಸಂಗೀತಾ ಮಾನೆ, ಮಂಜುಳಾ.ಎಸ್.ಆರ್, ಶ್ಯಾಮಲಾ ರತ್ನಾಕರ್, ಶಿಲಾಧರ ಮುಗಳಿ, ರವೀಂದ್ರ ಕಾಂಬಳೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-24-2035138551

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.