ಧಾರವಾಡ: ‘ಪ್ರಸ್ತುತ ಭಾರತದಂತಹ ಪ್ರಜಾಸತ್ತಾತ್ಮಕ ದೇಶದಲ್ಲಿ ಒಬ್ಬ ವ್ಯಕ್ತಿಯ ಪರಿಚಯವನ್ನು ಅವನ ಜಾತಿಯಿಂದ ಗುರುತಿಸುತ್ತಿರುವುದು ವಿಷಾದಕರ ಸಂಗತಿ’ ಎಂದು ಬೆಂಗಳೂರಿನ ದಲಿತ ಚಿಂತಕ ಪ್ರೊ.ಎ.ಹರಿರಾಮ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ಬಾಬು ಜಗಜೀವನರಾಂ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವು ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದ ಸಭಾಂಗಣದಲ್ಲಿ ಈಚೆಗೆ ನಡೆದ ಬಾಬು ಜಗಜೀವನರಾಂ ಜಯಂತ್ಯುತ್ಸವದಲ್ಲಿ ಮಾತನಾಡಿದರು.

‘ದೇಶ ಕಟ್ಟುವಲ್ಲಿ ಅನೇಕ ಮಹನೀಯರ ಕೊಡುಗೆ ಇದೆ. ಹೊಸ ಪೀಳಿಗೆಗೆ ದೇಶದ ಮಹಾನ್ ನಾಯಕರ ಸಂದೇಶಗಳನ್ನು ತಿಳಿಸುವ ಅಗತ್ಯವಿದೆ’ ಎಂದರು.

ಮನಸೂರಿ ರೇವಣ ಸಿದ್ದೇಶ್ವರ ಮಹಾಮಠದ ಬಸವರಾಜ ದೇವರು ಮಾತನಾಡಿ, ‘ಇಂದಿಗೂ ಜಾತಿ ತಾರತಮ್ಯ ಅವ್ಯಾಹತವಾಗಿ ನಡೆದಿದೆ. ಬಾಬು ಜಗಜೀವನರಾಂ ಅವರ ಸಂದೇಶಗಳನ್ನು ಜನರಿಗೆ ತಲುಪಲಿ’ ಎಂದು ಹೇಳಿದರು.

ಕರ್ನಾಟಕ ವಿವಿ ಕುಲಪತಿ ಪ್ರೊ.ಎ.ಎಂ.ಖಾನ್ ಮಾತನಾಡಿ, ‘ಜಾತ್ಯತೀತ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಶ್ರಮಿಸಬೇಕಾದ ಅಗತ್ಯವಿದೆ. ಹಸಿರು ಕ್ರಾಂತಿ ಮತ್ತು ಆಹಾರ ಭದ್ರತೆಗೆ ಬಾಬು ಜಗಜೀವನರಾಂ ಮಾಡಿದ ಕಾರ್ಯ ಶ್ಲಾಘನೀಯ’ ಎಂದರು.

ಪ್ರೊ.ಜಯಶ್ರೀ ದೇಶಮಾನೆ ಅವರ ಮೀಸಲಾತಿ ಜನಕ ಕೃತಿ ಬಿಡುಗಡೆ ಮಾಡಲಾಯಿತು.

ಕುಲಸಚಿವ ಶಂಕರೆಪ್ಪ ವಣಿಕ್ಯಾಳ, ಪರೀಕ್ಷಾಂಗ ಕುಲಸಚಿವ ನಿಜಲಿಂಗಪ್ಪ ಮಟ್ಟಿಹಾಳ, ಸಿಂಡಿಕೇಟ್ ಸದಸ್ಯ ಮಹೇಶ ಹುಲ್ಲೆನ್ನವರ, ಹಣಕಾಸು ಅಧಿಕಾರಿ ಪ್ರದೀಪಕುಮಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-24-348986043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.